ಸೈಂಟ್ ಬ್ರಿಜಿಡ್ಸ್ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪೂರ್ವಭಾವಿಯಾಗಿ ವಿವಿಧ ಸ್ಪರ್ಧೆಗಳು ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ

0

ಸುಳ್ಯದ ಸೈಂಟ್ ಬ್ರಿಜಿಡ್ಸ್ ಶಾಲೆಯಲ್ಲಿ ಇಂದು ಮಕ್ಕಳ ದಿನಾಚರಣೆಯ ಪೂರ್ವಭಾವಿಯಾಗಿ ವಿವಿಧ ಸ್ಪರ್ಧೆಗಳು ಹಾಗೂ ಕ್ರೈಸ್ತ ಶಿಕ್ಷಣ ಶಿಕ್ಷಕ ಶಿಕ್ಷಕಿಯರ ದಿನಾಚರಣೆಯನ್ನು ಆಚರಿಸಲಾಯಿತು.
ಬ್ರ ಸತೀಶ್ ಕುಮಾರ್ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿದರು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ರೆ.ಫಾ. ವಿಕ್ಟರ್ ಡಿಸೋಜ ರವರು ಬಹುಮಾನ ವಿತರಿಸಿದರು.
ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ನವೀನ್ ಮಚಾದೊ, ಕಾರ್ಯದರ್ಶಿ ಜೂಲಿಯಾನ ಕ್ರಾಸ್ಥ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಸಿ. ಅಂತೋನಿ ಮೇರಿ, ಸಿ . ಮೆಟ್ಟಿಲ್ದ, ಜೂಲಿಯಟ್ ಲೋಬೊ, ಶಾಂತಿ ಡಿಸೋಜ, ಮೇರಿಡಿಸೋಜ, ಶರ್ಮೀಳಾ, ರೇಷ್ಮಾ, ಅನಿತಾ ಮಸ್ಕರೇನ್ಹಸ್, ಕ್ರೈಸ್ತ ಶಿಕ್ಷಣ ಶಿಕ್ಷಕ ಶಿಕ್ಷಕಿಯರು ಈ ಸಂದರ್ಭದಲ್ಲಿ ಹಾಜರಿದ್ದರು.