ಎನ್ನೆಂಸಿಯಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ

0


ನೆಹರು ಮೆಮೋರಿಯಲ್ ಕಾಲೇಜಿನ ವಾಣಿಜ್ಯ ವಿಭಾಗ, ಕಾಮರ್ಸ್ ಅಸೋಸಿಯೇಶನ್ ಮತ್ತು ಆಂತರಿಕ ಗುಣಮಟ್ಟ ಖಾತರಿಕೋಶದ ಜಂಟಿ ಆಶ್ರಯದಲ್ಲಿ ನ.೦೯ ರಂದು ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆಯು ನಡೆಯಿತು.


ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರುದ್ರಕುಮಾರ್ ಎಂ.ಎಂ. ರವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಅಡ್ವೊಕೇಟ್ ವಿಪುಲ್ ನೀರ್ಪಾಡಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ರಾಷ್ಟ್ರೀಯ ಸೇವಾದಿನದ ಮತ್ತು ಸೇವೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ.ಎಂ.ಬಾಲಚಂದ್ರ ಗೌಡರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ವಾಣಿಜ್ಯ ಸಂಘದ ವಿಧ್ಯಾರ್ಥಿ ಸಂಯೋಜಕರಾದ ಅಂಕಿತ ಕೆ. ಸ್ವಾಗತಿಸಿ, ಹೃತಿಕ್ ಕೆ.ಕೆ. ವಂದಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಹಾಗೂ ಕಾಲೇಜಿನ ವಿಧ್ಯಾರ್ಥಿ ಕ್ಷೇಮಪಾಲನಾಧಿಕಾರಿ ಆದ ರತ್ನಾವತಿ ಡಿ. ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಆಂತರಿಕ ಗುಣಮಟ್ಟ ಖಾತರಿಕೋಶದ ಸಂಯೋಜನಾಧಿಕಾರಿಯಾದ ಡಾ.ಮಮತಾ.ಕೆ, ವಾಣಿಜ್ಯ ಸಂಘದ ಸಂಚಾಲಕಿ ಶ್ರೀಮತಿ ದಿವ್ಯಾ.ಟಿ.ಎಸ್, ಉಪನ್ಯಾಸಕರುಗಳಾದ ಶ್ರೀಧರ್.ವಿ, ಶ್ರೀಮತಿ ಗೀತಾ ಶೆಣೈರವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ವಾಣಿಜ್ಯ ವಿಭಾಗದ ಎಲ್ಲಾ ವಿಧ್ಯಾರ್ಥಿಗಳು ಭಾಗವಹಿಸಿದರು. ಅಂತಿಮ ಬಿ.ಕಾಂ ಪದವಿಯ ವಿದ್ಯಾರ್ಥಿನಿ ಪದ್ಮಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.