’ವರ್ಣ ಚಿತ್ತಾರ-2023’ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

0

ಕ್ರಿಯೇಟಿವ್ ಸ್ಕೂಲ್ ಆಫ್ ಆರ್ಟ್ಸ್ ಸುಳ್ಯ, ರೋಟರಿ ಕ್ಲಬ್ ಸುಳ್ಯ, ಇಂಟರ್‍ಯಾಕ್ಟ್ ಕ್ಲಬ್ ರೋಟರಿ ಶಾಲೆ ಮಿತ್ತಡ್ಕ, ಸುಳ್ಯ ಮತ್ತು ಸುದ್ದಿ ಬಿಡುಗಡೆ ಪತ್ರಿಕೆ, ಸುದ್ದಿ ವೆಬ್‌ಸೈಟ್ ಹಾಗೂ ಸುದ್ದಿ ಚಾನೆಲ್ ಸಹಯೋಗದೊಂದಿಗೆ ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ಸುಳ್ಯ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ವರ್ಣ ಚಿತ್ತಾರ-2023 ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವು ಇಂದು ಸುಳ್ಯದ ರಂಗ ಮಯೂರಿ ಕಲಾ ಕೇಂದ್ರದಲ್ಲಿ ನಡೆಯಿತು.

ಸುಳ್ಯ ಸರಕಾರಿ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ. ರಜನಿ‌ ಮನೋಜ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಬಹುಮಾನ ವಿತರಿಸಿದರು.

ಸುದ್ದಿ ಬಿಡುಗಡೆ ಮುಖ್ಯ ವರದಿಗಾರ ಹರೀಶ್ ಬಂಟ್ವಾಳ್, ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ, ಸುದ್ದಿ ಬಿಡುಗಡೆ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಂಮನೆ, ರಂಗ ಮಯೂರಿ ಕಲಾ ಕೇಂದ್ರದ ನಿರ್ದೇಶಕ ಲೋಕೇಶ್ ಊರುಬೈಲು ಉಪಸ್ಥಿತರಿದ್ದರು.

ಕ್ರಿಯೇಟಿವ್ ಸ್ಕೂಲ್ ಆಫ್ ಆರ್ಟ್ಸ್ ನ ನಿರ್ದೇಶಕರುಗಳಾದ ಶ್ರೀಹರಿ ಪೈಂದೋಡಿ ಸ್ವಾಗತಿಸಿ, ಪ್ರಸನ್ನ ಐವರ್ನಾಡು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.