ಸುಳ್ಯ ಪೊಲೀಸ್ ಠಾಣೆಯಲ್ಲಿ ಸಡಗರದ ದೀಪಾವಳಿ ಸಂಭ್ರಮ

0

ದೀಪಾವಳಿ ಹಬ್ಬದ ಪ್ರಯುಕ್ತ ಸುಳ್ಯ ಪೊಲೀಸ್ ಠಾಣೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ತಮ್ಮ ಕುಟುಂಬದ ಸದಸ್ಯರೊಂದಿಗೆ ದೀಪಾವಳಿ ಆಚರಣೆಯನ್ನು ಸಂಭ್ರಮದಿಂದ ಆಚರಿಸಿಕೊಂಡರು.

ಠಾಣಾ ಆವರಣದಲ್ಲಿ ದೀಪಗಳನ್ನು ಹಚ್ಚಿ,ಸುಂದರ ರಂಗೋಲಿಗಳನ್ನು ಬಿಡಿಸಿ ಹಸಿರು ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು.

ಪೋಲಿಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು ಹಾಗೂ ಠಾಣಾ ಸಿಬ್ಬಂದಿ ವರ್ಗದವರು, ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ಕುಟುಂಬದ ಸದಸ್ಯರು ಭಾಗವಹಿಸಿದ್ದರು.