ಸುಳ್ಯದ ಸ್ನೇಹ ಶಾಲೆಯಲ್ಲಿ ಗೂಡುದೀಪ ರಚನೆ ಸ್ಪರ್ಧೆ

0

ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗಾಗಿ ಗೂಡುದೀಪ ರಚನೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ವಿದ್ಯಾರ್ಥಿಗಳು ವಿವಿಧ ರೀತಿಯಲ್ಲಿ ಗೂಡು ದೀಪಗಳನ್ನು ರಚಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.