ನ.18 ನಾಳೆ ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕ ಕ್ರೀಡಾಕೂಟ

0

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ 2023-24ನೇ ಸಾಲಿನ ಶಾಲಾ ವಾರ್ಷಿಕ ಕ್ರೀಡಾಕೂಟವು ನ.18ರಂದು ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮೈದಾನದಲ್ಲಿ ಜರುಗಲಿದೆ.

ರಾಷ್ಟ್ರೀಯ ಕಬ್ಬಡಿ ತಂಡದ ಮಾಜಿ ನಾಯಕ ಜಗದೀಶ್ ಕುಂಬ್ಳೆಯವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಕ್ರೀಡಾಕೂಟವನ್ನು ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸತೀಶ್ ಕುಮಾರ್ ಕೆ.ಆರ್. ಅವರು ಉದ್ಘಾಟಿಸಲಿದ್ದಾರೆ. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ‌ ವಿದ್ಯಾಸಂಸ್ಥೆಯ ಗೌರವ ಸಲಹೆಗಾರ ನ.ಸೀತಾರಾಮ ಹಾಗೂ ವಿದ್ಯಾಸಂಸ್ಥೆಯ ಸಂಚಾಲಕ ಸುಧಾಕರ ಕಾಮತ್ ಅವರು ಉಪಸ್ಥಿತರಿರಲಿದ್ದಾರೆ.

ಕ್ರೀಡಾಕೂಟವು ಬೆಳಿಗ್ಗೆ 9.30ರಿಂದ ಅಪರಾಹ್ನ 3.30ರವರೆಗೆ ಜರುಗಲಿದ್ದು, ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ , ಅಧ್ಯಾಪಕರಿಗೆ ಹಾಗೂ ಪೋಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ಜರುಗಲಿದೆ.