ಕೊ.ಸಂಪಾಜೆ: ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

0

ಕೊಡಗು ಸಂಪಾಜೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಟ್ಟ ಆರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಗ್ರಾಮ ಪಂಚಾಯತಿ ಸದಸ್ಯ ಕುಮಾರ ಚಿದ್ಕಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಕ್ಕಳ ದಿನಾಚರಣೆಯ ಪ್ರಯುಕ್ತ ಅಂಗನವಾಡಿ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ, ಬಹುಮಾನ ವಿತರಿಸಲಾಯಿತು.


ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯ ಪಿ.ಎಲ್. ಸುರೇಶ್, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಮಕ್ಕಳ ಪೋಷಕರು, ಅಂಗನವಾಡಿ ಪುಟಾಣಿಗಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಕುಸುಮ ಕಾರ್ಯಕ್ರಮ ನಿರೂಪಿಸಿದರು.