ಬೆಳ್ಳಾರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರಂಥಾಲಯ ಸಪ್ತಾಹ

0

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳ ಕುರಿತು ಉಪನ್ಯಾಸ

ಬೇಂದ್ರೆ ಕಾವ್ಯಗಳು ಬದುಕಿನ ಭಾಗ : ನಾಯರ್‌ಕೆರೆ

ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಬೆಳ್ಳಾರೆ ಇದರ ಆಶ್ರಯದಲ್ಲಿ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇದರ ಸಹಕಾರದೊಂದಿಗೆ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮವು ಡಾ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.

ಸಮಾರಂಭದಲ್ಲಿ ಸುಳ್ಯ ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್‌ಕೆರೆಯವರು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ದ.ರಾ.ಬೇಂದ್ರೆಯವರ ಕುರಿತು ಉಪನ್ಯಾಸ ನೀಡಿದರು. ” “ಆಧುನಿಕ ಕನ್ನಡ ಸಾಹಿತ್ಯದ ಅಪರೂಪದ ಕವಿಯಾಗಿರುವ ಬೇಂದ್ರೆಯವರು ಎಲ್ಲ ಕಾಲಕ್ಕೂ ಬಾಳುವಂತಹ ಕವಿತೆಗಳನ್ನು ಬರೆದವರು. ಅವರ ಸಾಹಿತ್ಯದ ನುಡಿಗಳು ಮಾನವನ ನಾಡಿಮಿಡಿತವಾಗಿ ಸಾಹಿತ್ಯ ರಂಗವನ್ನು ಶ್ರೀಮಂತಗೊಳಿಸಿದೆ. ಅವರ ಕವಿತೆಯ ಸಾಲುಗಳು ಕಿವಿಯ ನಿನಾದವಾಗಿ ಹೊರಹೊಮ್ಮಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಅವರು ಪತ್ರಿಕಾ ಬರವಣಿಗೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ದಾಮೋದರ ಕಣಜಾಲು ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ದೀಕ್ಷಿತಾ ಸ್ವಾಗತಿಸಿ, ಸಾಂಸ್ಕೃತಿಕ ಸಂಘದ ಸಂಚಾಲಕರಾಗಿರುವ ಉಪನ್ಯಾಸಕ ಯತೀಶ್ ಕುಮಾರ್ ಪ್ರಸ್ತಾವನೆಗೈದರು. ಆಂತರಿಕ ಗುಣಮಟ್ಟ ವಿಭಾಗದ ಸಂಚಾಲಕರಾಗಿರುವ ಉಪನ್ಯಾಸಕಿ ಶ್ರೀಮತಿ ಜ್ಯೋತಿ ಮಾತನಾಡಿದರು. ವಿದ್ಯಾರ್ಥಿನಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಬೆಳ್ಳಾರೆ ಗ್ರಾಮ‌ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಶಶಿಕಲಾ, ಗ್ರಂಥಾಲಯ ಸಲಹಾ ಸಮಿತಿ ಸದಸ್ಯ ಸಂಜಯ್ ನೆಟ್ಟಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು, ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.