ಸುಳ್ಯ ಲಯನ್ಸ್ ಕ್ಲಬ್ ಮತ್ತು ಸುಳ್ಯ ಸರಕಾರಿ ಪದವಿ ಕಾಲೇಜು ಸಹಯೋಗದಲ್ಲಿ ಒಂದು ದಿನದ ಸ್ವ ಉದ್ಯೋಗ ಮತ್ತು ಉದ್ಯಮಶೀಲತೆ ಬಗ್ಗೆ ಮಾಹಿತಿ ಕಾರ್ಯಕ್ರಮ ಸರಕಾರಿ ಪದವಿ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿದ್ದ ಉಜಿರೆ ರೆಡ್ ಸೆಟ್ ಸಂಸ್ಥೆಯ ಮುಖ್ಯ ತರಬೇತುದಾರರಾದ ಅಬ್ರಹಂ ಜೇಮ್ ಉದ್ಘಾಟನೆ ನೆರವೇರಿಸಿದರು.















ಕಾಲೇಜಿನ ಪ್ರಾಂಶುಪಾಲ ಸತೀಶ್ ಕೊಯಿಂಗಾಜೆ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್, ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು, ಕೋಶಾಧಿಕಾರಿ ಕಿರಣ್ ನೀರ್ಪಾಡಿ, ಕಾಲೇಜಿನ ಪ್ಲೇಸ್ ಮೆಂಟ್ ಆಫೀಸರ್ ಪ್ರೊ. ಗೀತಾ ಎಸ್., ಡಾ.ಜಯಶ್ರೀ ಕೆ ವೇದಿಕೆಯಲ್ಲಿ ಇದ್ದರು.
200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.









