ಜಾಲ್ಸೂರು ಗ್ರಾಮದ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನವೀಕೃತಗೊಂಡ ಸುಬ್ರಾಯಶ್ರೀ ಸಭಾಭವನದ ಉದ್ಘಾಟನೆಯು ನ.18ರಂದು ಬೆಳಿಗ್ಗೆ ನಡೆಯಿತು.

ಬೆಳಿಗ್ಗೆ ದೇವಸ್ಥಾನದ ಪ್ರದಾನ ಅರ್ಚಕ ಶ್ರೀವರ ಭಟ್ ಅವರ ನೇತೃತ್ವದಲ್ಲಿ ಗಣಪತಿ ಹವನ ನಡೆಯಿತು.
ಹಿರಿಯ ಉದ್ಯಮಿ ಉಪೇಂದ್ರ ಕಾಮತ್ ವಿನೋಬನಗರ ಹಾಗೂ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ ಅವರು ದೀಪಬೆಳಗಿಸುವುದರ ಮೂಲಕ ನವೀಕೃತ ಸುಬ್ರಾಯಶ್ರೀ ಸಭಾಭವನವನ್ನು ಉದ್ಘಾಟಿಸಿದರು.
















ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಊರ ದಾನಿಗಳು ಹಾಗೂ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ಸಹಕಾರದೊಂದಿಗೆ ದೇವಸ್ಥಾನದಲ್ಲಿ ನಡೆದ ಅಭಿವೃದ್ಧಿ ಕಾರ್ಯ ಹಾಗೂ ನವೀಕೃತ ಸುಬ್ರಾಯಶ್ರೀ ಸಭಾಭವನದ ನಿರ್ಮಾಣದ ಖರ್ಚು ವೆಚ್ಚಗಳ ಕುರಿತು ಮಾಹಿತಿ ನೀಡಿದರು.

ವೇದಿಕೆಯಲ್ಲಿ ಜಾಲ್ಸೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್ ವಿನೋಬನಗರ, ಜೀರ್ಣೋದ್ಧಾರ ಸಮಿತಿ ಸಂಯೋಜಕ ನ. ಸೀತಾರಾಮ, ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ವಿವಿಧ ಬೈಲುವಾರು ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.









