ಪುತ್ತೂರು ವಿಭಾಗದ ಡಿ ವೈ ಎಸ್ ಪಿ ಡಾ.ಗಾನ ಪಿ ಕುಮಾರ್ ರವರಿಗೆ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ಸರ್ಕಾರದಿಂದ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಗಾನಾ ರವರು ಕಳೆದ ಸುಮಾರು ಮೂರು ವರ್ಷಗಳಿಂದ ಪುತ್ತೂರು ವಿಭಾಗದ ಡಿವೈಎಸ್ಪಿ ಆಗಿ ಒಬ್ಬ ಮಹಿಳಾ ಅಧಿಕಾರಿಯಾಗಿ ಉತ್ತಮ ಸೇವೆಯ ಮೂಲಕ ಗುರುತಿಸಿಕೊಂಡಿದ್ದರು. ಎರಡನೇ ಬಾರಿಗೆ ಪುತ್ತೂರು ವಿಭಾಗಕ್ಕೆ ಕರ್ತವ್ಯಕ್ಕೆ ಬಂದಿದ್ದ ಇವರು ಜನಸ್ನೇಹಿ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು.
ಪುತ್ತೂರು ವಿಭಾಗದ ಹಲವಾರು ಪ್ರಕರಣಗಳನ್ನು ಭೇದಿಸುವಲ್ಲಿ ಇವರು ಯಶಸ್ವಿಯಾಗಿದ್ದರು.