ಕೋಡಿಂಬಾಳದಲ್ಲಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚೆಂಬುವಿನ ಬೊಲೆರೋ ಜಖಂ

0

ಚೆಂಬುವಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಚೆಂಬು ಗ್ರಾಮದ ಬೊಲೆರೋ ವಾಹನವೊಂದು ಕೋಡಿಂಬಾಳ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಜಖಂಗೊಂಡ ಘಟನೆ ನ.19ರಂದು ಸಂಭವಿಸಿದೆ.

ಚೆಂಬು ಗ್ರಾಮದ ಮೇಲ್ಚೆಂಬು ಹಾರೆಂಬಿಯ ಶರತ್ ಚೇತನ್ ಅವರು ತಮ್ಮ ಕುಟುಂಬದೊಂದಿಗೆ ಕಡಬ ದಾರಿಯಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ಕಡಬ ತಾಲೂಕಿನ ಕೋಡಿಂಬಾಳ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ. ಘಟನೆಯಲ್ಲಿ ವಿದ್ಯುತ್ ಕಂಬ ಮುರಿದಿದ್ದು, ಬೊಲೆರೋ ವಾಹನ ಜಖಂಗೊಂಡಿರುವುದಾಗಿ ತಿಳಿದುಬಂದಿದೆ.