ಪರವಾನಗಿ ಇಲ್ಲದೆ ನಾಡ ಕೋವಿ‌ ಹೊಂದಿದ್ದ ಪ್ರಕರಣ : ಆರೋಪ ಸಾಬೀತು : ಶಿಕ್ಷೆ ವಿಧಿಸಿದ ನ್ಯಾಯಾಲಯ

0

ಪರವಾನಗಿ ಇಲ್ಲದೆ ನಾಡಕೋವಿ ಹೊಂದಿದ್ದ ಪ್ರಕರಣದ ಆರೋಪದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ‌ ಸಾಬೀತಾಗಿದ್ದು ಸುಳ್ಯ‌ ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿರುವುದಾಗಿ ತಿಳಿದುಬಂದಿದೆ.

2013 ರಲ್ಲಿ ಕಣ್ಣೂರು ಜಿಲ್ಲೆಯ ಎಂ.ಕೆ ಅಜಿತ್ ರವರು ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ಬಟ್ಟಂಗಾಯ ಎಂಬಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಮೀನಿನಲ್ಲಿ ಇರುವ ಮನೆಯ ಅಂಗಳಕ್ಕೆ ಬಂದು ಪರವಾನಿಗೆ ಇಲ್ಲದ ನಾಡ ಕೋವಿ, ಗನ್ ಪೌಡರ್ ಹಾಗೂ 2 ಕಬ್ಬಿಣದ ಕಡ್ಡಿಗಳನ್ನು ತಂದಿದ್ದರು. ಈ‌ವಿಚಾರ ಪೋಲೀಸರಿಗೆ ತಿಳಿದು ಆರೋಪಿಯ ವಿರುದ್ಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೇಸಿನ ವಿಚಾರಣೆ ಸುಳ್ಯ‌ ನ್ಯಾಯಾಲಯದಲ್ಲಿ‌ ಅಪರಾಧ ಸಾಬೀತಾಗಿರುವುದರಿಂದ ಸುಳ್ಯದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಬಿ.ಮೋಹನ್ ಬಾಬು ರವರು ಅಪರಾಧಿಗೆ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಕಲಂ 3(1), 25 ಯಡಿಯಲ್ಲಿ 2 ವರ್ಷಗಳ ಸರಳ ಜೈಲು ಶಿಕ್ಷೆ ಮತ್ತು ರೂ. 10,000 ದಂಡವನ್ನು ನ.21ರಂದು ಶಿಕ್ಷೆ ವಿಧಿಸಿ ಆದೇಶ ಮಾಡಿದ್ದಾರೆ.

ಸರಕಾರದ ಪರವಾಗಿ ಸುಳ್ಯದ ಸಹಾಯಕ ಸರಕಾರಿ ಅಭಿಯೋಜಕರು ಪ್ರಕರಣ ನಡೆಸಿದ್ದಾರೆ