ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಸಪ್ತಾಹ ಸಮಾರೋಪ

0

ಗ್ರಂಥಾಲಯಗಳು ಅಧ್ಯಯನ ಕೇಂದ್ರಗಳಾಗಿ ಮಾರ್ಪಾಡಾಗಲಿ – ಚಂದ್ರಶೇಖರ ಪೇರಾಲು

ಕರ್ನಾಟಕ ಸರ್ಕಾರ,ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಬೆಳ್ಳಾರೆ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಬೆಳ್ಳಾರೆ ಇದರ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಗ್ರಂಥಾಲಯ ಸಪ್ತಾಹ ಸಮಾರೋಪ ಸಮಾರಂಭ ನ.20ರಂದು ರಾಜೀವ ಗಾಂಧಿ ಸೇವಾಕೇಂದ್ರ ಬೆಳ್ಳಾರೆಯಲ್ಲಿ ನಡೆಯಿತು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಚಂದ್ರಶೇಖರ ಪೇರಾಲು ಇವರು ಸಮಾರೋಪ ಭಾಷಣ ಮಾಡಿದರು.

ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ , ಡಾ|. ಶಿವರಾಮ ಕಾರಂತ ಸರಕಾರಿ ಪ್ರ.ದ ಕಾಲೇಜು ಬೆಳ್ಳಾರೆಯ ಪ್ರಾಂಶುಪಾಲರಾದ ಪ್ರೋ ದಾಮೋದರ ಕಣಜಾಲು ಮುಖ್ಯ ಅತಿಥಿಗಳಾಗಿ ಶುಭಹಾರೈಸಿದರು. ಬೆಳ್ಳಾರೆ ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾದ ಶ್ರೀಮತಿ ವೀಣಾ ಮಂಜುನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆಯ ಹತ್ತನೇ ತರಗತಿ ವಿದ್ಯಾರ್ಥಿನಿಯರಾದ ಕು. ಸಮನ್ವಿತಾ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಪ್ರೋ ಯು.ಆರ್.ಅನಂತಮೂರ್ತಿ ಇವರ ಜೀವನ ಮತ್ತು ಸಾಹಿತ್ಯಿಕ ಕೊಡುಗೆಗಳ ಬಗ್ಗೆ ಮತ್ತು ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ ಇವರ ಜೀವನ ಹಾಗೂ ಸಾಹಿತ್ಯಿಕ ಕೊಡುಗೆಗಳ ಬಗ್ಗೆ ಕು. ಅಕ್ಷತಾ ಉಪನ್ಯಾಸ ನೀಡಿದರು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀಮತಿ ನಮಿತ ಎಲ್. ರೈ ವಹಿಸಿದರು. ಏಳು ದಿನಗಳ ಗ್ರಂಥಾಲಯ ಸಪ್ತಾಹದಲ್ಲಿ ವಿವಿಧ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಏರ್ಪಡಿಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಗ್ರಾಮ ಪಂಚಾಯತು ಸಿಬ್ಬಂದಿ ವರ್ಗ ಹಾಗೂ ಎಲ್ಲಾ ಸಂಘ ಸಂಸ್ಥೆಗಳು ಸಹಕಾರ ನೀಡಿದರು.


ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಮುಖ್ಯೋಪಾಧ್ಯಾಯರು ಗ್ರಂಥಾಲಯ ಸಲಹಾ ಸಮಿತಿ ಸದಸ್ಯರಾದ ಮಾಯಿಲಪ್ಪರವರು ಎಲ್ಲರನ್ನು ಸ್ವಾಗತಿಸಿ,ಗ್ರಂಥಾಲಯ ಸಲಹಾ ಸಮಿತಿ ಸದಸ್ಯರಾದ ಸಂಜಯ್ ನೆಟ್ಟಾರು ವಂದಿಸಿದರು. ನಿಶ್ಮಿತಾ ಇವರು ಕಾರ್ಯಕ್ರಮವನ್ನು ನಿರೂಪಿಸಿದರು .