ಮರ್ಕಂಜ ಪ್ರೌಢಶಾಲೆ ಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ

0

ರಾಜ್ಯಮಟ್ಟದ ಪ್ರಾಚ್ಯ ಪ್ರಜ್ಞೆ ರಸಪ್ರಶ್ನೆ ಸ್ಪರ್ಧೆಗೆ ಮರ್ಕಂಜ ಪ್ರೌಢಶಾಲೆ ಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕಾವಳ ಪಡೂರು ವಗ್ಗ, ಬಂಟ್ವಾಳ ಇಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮದಲ್ಲಿ ಸರಕಾರಿ ಪ್ರೌಢಶಾಲೆ ಮರ್ಕಂಜದ ಹತ್ತನೇ ತರಗತಿಯ ವಿದ್ಯಾರ್ಥಿ ರಚನ್ ಬಿ ಎ ಮತ್ತು 9ನೇ ತರಗತಿಯ ಚಿನ್ಮಯ್ ಇವರು ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವುದರೊಂದಿಗೆ ರಾಜ್ಯಮಟ್ಟದ ಪ್ರಾಚ್ಯ ಪ್ರಜ್ಞೆ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.