ಮುಕ್ಕೂರು : ಶಾಲಾ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಮೂರನೇ ಹಂತದ ಪೂರ್ವಭಾವಿ ಸಭೆ

0

ಡಿ.3 ರಂದು ನಡೆಯಲಿರುವ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಕ್ಕೂರು: ಶತಮಾನದ ಹೊಸ್ತಿಲಿನಲ್ಲಿರುವ ಮುಕ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.22 ರಂದು ಶಾಲಾ ವಾರ್ಷಿಕೋತ್ಸವ ಜರುಗಲಿದ್ದು ಈ ಹಿನ್ನೆಲೆಯಲ್ಲಿ ಡಿ.3 ರಂದು ಊರವರಿಗೆ, ಹಳೆ ವಿದ್ಯಾರ್ಥಿಗಳಿಗೆ ನಡೆಯಲಿರುವ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ನಡೆಯಿತು.

ಶಾಲಾ ವಾರ್ಷಿಕೋತ್ಸವ ಹಾಗೂ ಕ್ರೀಡಾಕೂಟ ಆಚರಿಸುವ ನಿಟ್ಟಿನಲ್ಲಿ ಮೂರನೇ ಹಂತದ ಪೂರ್ವಭಾವಿ ಸಭೆ ಹಾಗೂ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆಯು ಗುರುವಾರ ಸಂಜೆ ಮುಕ್ಕೂರು ಶಾಲಾ ವಠಾರದಲ್ಲಿ ನಡೆಯಿತು.

ಡಿಸೆಂಬರ್ 3 ರಂದು ಹಳೆ ವಿದ್ಯಾರ್ಥಿಗಳಿಗೆ, ಊರವರಿಗೆ ಮುಕ್ಕೂರು ಶಾಲಾ ವಠಾರದಲ್ಲಿ ಕ್ರೀಡಾಕೂಟ ನಡೆಸಲು ಆಗಬೇಕಿರುವ ಸಿದ್ಧತೆಗಳ‌ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಬೆಳಗ್ಗೆ 9 ಗಂಟೆಗೆ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದ್ದು ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. 8 ರಿಂದ 12 ನೇ ತರಗತಿ ವಿಭಾಗದಲ್ಲಿ ಹಗ್ಗಜಗ್ಗಾಟ, ತ್ರೋಬಾಲ್, ವಾಲಿಬಾಲ್, ಲಕ್ಕಿಗೇಮ್, ಪುರುಷರ ವಿಭಾಗದಲ್ಲಿ ಹಗ್ಗಜಗ್ಗಾಟ, ವಾಲಿಬಾಲ್, ಲಕ್ಕಿಗೇಮ್, ಮಹಿಳಾ ವಿಭಾಗದಲ್ಲಿ ಹಗ್ಗಜಗ್ಗಾಟ, ತ್ರೋಬಾಲ್, ಲಕ್ಕಿಗೇಮ್ ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ಕ್ರೀಡಾಕೂಟದಂದೆ ಬಹುಮಾನ ವಿತರಿಸಲು ಸಭೆಯಲ್ಲಿ ‌ನಿರ್ಧರಿಸಲಾಯಿತು.

ಕ್ರೀಡಾಕೂಟದ ದಿನ ಮಧ್ಯಾಹ್ನ ಊಟದ ವ್ಯವಸ್ಥೆ, ಕ್ರೀಡಾಕೂಟಕ್ಕೆ ತೀರ್ಪುಗಾರರು, ಶಾಲಾ ವಾರ್ಷಿಕೋತ್ಸವದ ದಿನ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಯ ಮೊದಲಾದವುಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಯಿತು.

ಶಾಲಾ ಪ್ರಭಾರ ಮುಖ್ಯಗುರು ಅರವಿಂದ ಕೆ ಅವರು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಪ್ರಗತಿಪರ ಕೃಷಿಕ ಮೋಹನ ಬೈಪಡಿತ್ತಾಯ, ಶಾಲಾ ಎಸ್ಡಿಎಂಸಿ ಅಧ್ಯಕ್ಷ ಜಯಂತ ಗೌಡ ಕುಂಡಡ್ಕ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಧಾಕರ ರೈ ಕುಂಜಾಡಿ, ಶಾಲಾ ಹಿತಚಿಂತನಾ ಸಮಿತಿ ಕೋಶಾಧಿಕಾರಿ ಹೊನ್ನಪ್ಪ ಗೌಡ ಚಾಮುಂಡಿಮೂಲೆ ಉಪಸ್ಥಿತರಿದ್ದರು.