ಗೂನಡ್ಕ ಮಾರುತಿ ಸ್ಕೂಲ್‌ನಲ್ಲಿ “ಸಂವಾದಾತ್ಮಕ ಡಿಜಿಟಲ್ ಬೋರ್ಡ್” ತರಗತಿಯ ಶುಭಾರಂಭ

0


ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೂನಡ್ಕದಲ್ಲಿ ಶಿಕ್ಷಣಕ್ಕೆ ಬೇಕಾದ ಆಧುನಿಕ ತಂತ್ರಜ್ಞಾನದ “ಸಂವಾದಾತ್ಮಕ ಡಿಜಿಟಲ್ ಬೋರ್ಡ್” ತರಗತಿಯನ್ನು ಕೆವಿಜಿ ಆಯುರ್ವೇದಿಕ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿಯವರು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾದ ಡಾಕ್ಟರ್ ಲೀಲಾಧರ್ ಡಿ.ವಿ ಅವರು ತಂತ್ರಜ್ಞಾನದ ಬಳಕೆಯನ್ನು ಜ್ಞಾನ ಪಡೆಯಲು ಮತ್ತು ಒಳ್ಳೆಯ ಉದ್ದೇಶಕ್ಕಾಗಿ ಉಪಯೋಗಿಸಲು ಮಕ್ಕಳಿಗೆ ತಿಳಿಸಿದರು. ಗ್ರಾಮೀಣ ಪ್ರದೇಶದಲ್ಲಿದ್ದರೂ ಸಂಸ್ಥೆಯು ಮಕ್ಕಳ ಕಲಿಕೆಗೆ ಬೇಕಾದ ಎಲ್ಲಾ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿರುವುದಕ್ಕೆ ಸಂಸ್ಥೆಯ ಅಧ್ಯಕ್ಷರಾದ ರುಕ್ಮಯದಾಸ್ ರವರನ್ನು ಮತ್ತು ಟ್ರಸ್ಟ್ ನ ಎಲ್ಲಾ ಸದಸ್ಯರುಗಳನ್ನು ಶ್ಲಾಘಿಸಿದರು.
ಈ ಕಾರ್ಯಕ್ರಮದಲ್ಲಿ ಡಾಕ್ಟರ್ ಲೀಲಾಧರ್ ಡಿ.ವಿ, ಸಂಸ್ಥೆಯ ಅಧ್ಯಕ್ಷರಾದ ರುಕ್ಮಯದಾಸ್, ಲೀಲಾವತಿ ರುಕ್ಮಯ್ಯ ದಾಸ್, ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್, ಶಾಲಾ ಪ್ರಾಂಶುಪಾಲರಾದ ಶೋಭಾ ಕಿಶೋರ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ರಮೇಶ ಹೆಚ್, ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸರಿನಾ ಫಾತಿಮ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.