ಗುತ್ತಿಗಾರು: ಅರಿವು ಕೇಂದ್ರದಲ್ಲಿ ಸಂವಿಧಾನ ದಿನಾಚರಣೆ

0

ಗುತ್ತಿಗಾರು ಗ್ರಾಮ ಪಂಚಾಯತ್ ,ಅರಿವು ಕೇಂದ್ರ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮತ್ತು ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇದರ ಸಹಯೋಗದೊಂದಿಗೆ ನವೋದಯ ಮತ್ತು ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷೆ ತರಬೇತಿ ಕೇಂದ್ರ ಗುತ್ತಿಗಾರು ಇಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆಯನ್ನು ಬರೆದು ಓದಿದರು. ಉತ್ತಮ ಬರವಣಿಗೆ ಶೈಲಿಯಲ್ಲಿ ಬರೆದ ಬಂಗ್ಲೆಗುಡ್ಡೆ ಶಾಲೆಯ ವಿದ್ಯಾರ್ಥಿ ಆದಿತ್ಯನನ್ನು ಗುರುತಿಸಲಾಯಿತು. ಸಂವಿಧಾನ ದಿನದ ಬಗ್ಗೆ ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಅಭಿಲಾಷ ಮೋಟ್ನೂರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.