ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಸ್ಪರ್ಧೆಗಳ ಉದ್ಘಾಟನಾ ಸಮಾರಂಭ

0

ಶಿಕ್ಷಣ ಇಲಾಖೆ ಕ್ಷೇತ್ರ, ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಮತ್ತು ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆ ಸುಳ್ಯ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮತದಾರರ ಸಾಕ್ಷರತಾ ಸಂಘದ ವತಿಯಿಂದ ತಾಲೂಕು ಮಟ್ಟದ ಸ್ಪರ್ಧೆಗಳ ಉದ್ಘಾಟನಾ ಸಮಾರಂಭವನ್ನು ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆಯಲ್ಲಿ ನಡೆಯಿತು.

ಕಾರ್ಯಕ್ರವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ ಉದ್ಘಾಟನೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ವಹಿಸಿದರು.

ವೇದಿಕೆಯಲ್ಲಿ ದಾಮೋದರ ಎನ್, ಶಿಕ್ಷಣ ಸಂಯೋಜಕರಾದ ಶ್ರೀಮತಿ ಸಂಧ್ಯಾ ಕುಮಾರಿ , ಶ್ರೀಮತಿ ಮಮತಾ, ಮುಖ್ಯೋಪಾಧ್ಯಾಯಿನಿಯಾದ ಭಾರತಿ ಪಿ. ಉಪಸ್ಥಿತರಿದ್ದರು.