ಸೋಣಂಗೇರಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ವೃತ್ತದ ಬಳಿ ರಸ್ತೆಯ ಎಡ ಬದಿಯಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿರುವುದರಿಂದ ರಸ್ತೆಯ ಬದಿಯಲ್ಲಿ ಸಾಗಲು ಸಾವರ್ಜನಿಕರಿಗೆ ತೊಂದರೆ ಉಂಟಾಗುತ್ತಿದ್ದು, ಈ ಫಲಕಗಳನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಉಂಟಾಗಿರುವ ಸಮಸ್ಯೆಯನ್ನು ಸರಿ ಪಡಿಸಿಕೊಡುವಂತೆ ನ.ಪಂ.ಗೆ ಸಾಮಾಜಿಕ ಹೋರಾಟಗಾರ ಸತ್ಯಶಾಂತಿ ತ್ಯಾಗ ಮೂರ್ತಿ ಮನವಿ ನೀಡಿದರು.