ಸುಲ್ಯ ಎನ್ನೆಂಸಿಯ ಆಂತರಿಕ ಗುಣಮಟ್ಟ ಖಾತರಿಕೋಶ ಮತ್ತು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಸಂವಿಧಾನ ದಿನಾಚರಣೆಯನ್ನು ನ.28 ರಂದು ಆಚರಿಸಲಾಯಿತು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಮತ ಕೆ. ಸಂವಿಧಾನದ ಮಹತ್ವ ಮತ್ತು ಸಂವಿಧಾನ ಪೀಠಿಕೆಯ ಮೌಲ್ಯಗಳ ಕುರಿತು ಮಾತನಾಡಿದರು. ಸಂವಿಧಾನದ ಪೀಠಿಕೆಯ ಪ್ರತಿಜ್ಞೆಯನ್ನು ಸ್ವೀಕರಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಭಾರತದ ಸಂವಿಧಾನದ ಬಗ್ಗೆ ಅರಿವನ್ನು ಮೂಡಿಸುವ ಕಾರ್‍ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಸಭಾ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ.ಎಂ. ವಹಿಸಿದ್ದರು. ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕಾರ್‍ಯಕ್ರಮದಲ್ಲಿ ಭಾಗವಹಿಸಿದ್ದರು. ಭಾರತ ಸರ್ಕಾರ ಮತ್ತು ಸಂವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಫರ್ಧೆಯನ್ನು ಆಯೋಜಿಸಿ ವಿಜೇತರಿಗೆ ಬಹುಮಾನವನ್ನು ನೀಡಲಾಯಿತು.