ದ.10 ರಂದು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರ ಹಳೆ ವಿದ್ಯಾರ್ಥಿಗಳ ಸಭೆ

0

ಶಾಲಾ ಸುವರ್ಣ ಮಹೋತ್ಸವ ಕುರಿತು ಚರ್ಚೆ

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರ ಸುವರ್ಣ ಮಹೋತ್ಸವ ಜ.೧೨,೧೩,೧೪ ರಂದು ನಡೆಯಲಿದ್ದು, ಈ ಬಗ್ಗೆ ಚರ್ಚಿಸುವುದಕ್ಕಾಗಿ ಪ್ರೌಢಶಾಲೆಯ ಹಳೆವಿದ್ಯಾರ್ಥಿಗಳ ಸಭೆಯನ್ನು ದ. 10 ರಂದು ಆದಿತ್ಯವಾರ ಪೂರ್ವಾಹ್ನ 10 ಗಂಟೆಗೆ ಪ್ರೌಢಶಾಲೆಯಲ್ಲಿ ಕರೆಯಲಾಗಿದೆ ಎಂದು ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಮಾಜಿ ಸಚಿವ ಎಸ್.ಅಂಗಾರ ಹಾಗೂ ಶಾಲಾ ಸಂಚಾಲಕ ರಾಧಾಕೃಷ್ಣ ಬೊಳ್ಳೂರು ತಿಳಿಸಿದ್ದಾರೆ.

ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಪ್ರೌಢಶಾಲೆಯ ಸಾವಿರಾರು ಹಳೆ ವಿದ್ಯಾರ್ಥಿಗಳು ವಿವಿಧ ಸ್ಥರಗಳಲ್ಲಿ ಸಾಮಾಜಿಕವಾಗಿ ಮತ್ತು ಔದ್ಯೋಗಿಕವಾಗಿ ಕೆಲಸ ಮಾಡುತ್ತಿದ್ದು, ಪ್ರೌಢಶಾಲೆಯ ಅಭಿವೃದ್ಧಿಗೆ ಎಲ್ಲಾ ಹಳೆ ವಿದ್ಯಾರ್ಥಿಗಳ ಸಹಕಾರ ಬೇಕಾಗಿದೆ. ಈ ದಿಸೆಯಲ್ಲಿ ಸುವರ್ಣ ಮಹೋತ್ಸವದಲ್ಲಿ ಹಳೆ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಚರ್ಚಿಸುವುದಕ್ಕಾಗಿ ಕರೆಯಲಾಗಿರುವ ಹಳೆ ವಿದ್ಯಾರ್ಥಿಗಳ ಸಭೆಯಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳೆಲ್ಲರೂ ಭಾಗವಹಿಸಬೇಕೆಂದು ಅವರು ವಿನಂತಿಸಿದ್ದಾರೆ.