ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ ಇದರ ವಾರ್ಷಿಕೋತ್ಸವ ಸಮಾರಂಭವು ಡಿ.7 ರಂದು ಎಸ್ ಎಸ್ ಪಿಯು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಿತು.
ವಾರ್ಷಿಕೋತ್ಸವ ಸಮಾರಂಭವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ ವಹಿಸಿದ್ದರು .ವೇದಿಕೆಯಲ್ಲಿ ನಿವೃತ್ತ ಪ್ರಾಂಶುಪಾಲ ಪ್ರೊ .ಕೆ.ಆರ್. ಶೆಟ್ಟಿಗಾರ್, ಗ್ರಾಮ ಪಂಚಾಯತ್ ಉಪಾಧ್ಯಕ್ಷ ವೆಂಕಟೇಶ್ ಎಚ್ಎಲ್, ಪಂಚಾಯತ್ ಸದಸ್ಯರುಗಳಾದ ನಾರಾಯಣ ಅಗ್ರಹಾರ, ರಾಜೇಶ್ ಎನ್ ಎಸ್ ,ಹರೀಶ್ ಹಿಂಜಾಡಿ, ಸೌಮ್ಯ, ದಿವ್ಯ, ಭಾರತಿ , ಇದ್ದರು. ಸುಳ್ಯ ಕ್ಷೇತ್ರ ಸಮನ್ವಯ ಅಧಿಕಾರಿ ಶೀತಲ್ ಪಿಟಿ, ಸುಬ್ರಹ್ಮಣ್ಯ ಕ್ಲಸ್ಟರ್ ಮುಖ್ಯಸ್ಥ ಜಯಂತ ಉಪಸ್ಥಿತರಿದ್ದರು. ನಿವೃತ್ತ ಮುಖ್ಯ ಶಿಕ್ಷಕಿ ಸುಶೀಲಾ ಹಾಗೂ ಭಡ್ತಿಗೊಂಡ ಮುಖ್ಯ ಶಿಕ್ಷಕಿ ಮಾಲಿನಿ ಅವರುಗಳನ್ನು ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯ ಅಧಿಕಾರಿಗಳು ಸನ್ಮಾನಿಸಿದರು. ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವಿಶ್ವನಾಥ ಉಪಸ್ಥಿತರಿದ್ದರು. ಉಪಾಧ್ಯಕ್ಷೆ ಜಯಶ್ರೀ ಸ್ವಾಗತಿಸಿ ದರು .ಶಾಲಾ ಮುಖ್ಯ ಶಿಕ್ಷಕ ಮಾಧವ ಮೂಕಮಲೆ ವರದಿ ವಾಚಿಸಿದರು. . ಸಹ ಶಿಕ್ಷಕರಾದ ಪ್ರತಾಪ್ ಹಾಗೂ ವಿನೋದ ಕಾರ್ಯಕ್ರಮ ನಿರೂಪಿಸಿದರು. ಮಾಧವ ಮೂಕ ಮಲೆ ಧನ್ಯವಾದ ಸಮರ್ಪಿಸಿದರು. ಸಭಾ ಕಾರ್ಯಕ್ರಮ ಬಳಿಕ ಅಪರಾಹ್ನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಹ ಶಿಕ್ಷಕ ಶಿಕ್ಷಕಿಯರು ಸಹಕರಿಸಿದರು. ವಿದ್ಯಾರ್ಥಿಗಳ ಪೋಷಕರು ಸಭೆಯಲ್ಲಿ ಉಪಸ್ಥಿತರಿದ್ದರು.