ಪಂಜ ಹಾಲು ಉತ್ಪಾದಕ ಸಹಕಾರ ಸಂಘಕ್ಕೆ ಚುನಾವಣೆ🔷12 ಮಂದಿ ನಾಮಪತ್ರ ಸಲ್ಲಿಕೆ

0

🔷 ಡಿ.12. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ

ಪಂಜ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರುಗಳ ಆಯ್ಕೆಗೆ ಚುನಾವಣೆಗೆ ಡಿ.8ರಿಂದ ನಾಮಪತ್ರಗಳ ಸಲ್ಲಿಕೆ ಆರಂಭ
ಗೊಂಡಿದ್ದು ಪೂರ್ವಾಹ್ನ ಗಂಟೆ 10 ರಿಂದ ಮಧ್ಯಾಹ್ನ ಗಂಟೆ 1 ತನಕ ಸಲ್ಲಿಸಿ ಬಹುದು. ಡಿ.12 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಡಿ.9ರಂದು 12 ಮಂದಿ ನಾಮಪತ್ರ ಸಲ್ಲಿಸಿದ್ದಾರೆ.

ಇಲ್ಲಿ ಒಟ್ಟು 13 ಮಂದಿ ನಿರ್ದೇಶಕರುಗಳ ಆಯ್ಕೆಯಾಗಬೇಕಿದ್ದು, ಏಳು ಮಂದಿ ಸಾಮಾನ್ಯ ಸ್ಥಾನದಿಂದ, ತಲಾ ಒಬ್ಬರು ಪ.ಜಾತಿ ಮೀಸಲು ಸ್ಥಾನ, ಪ.ಪಂಗಡ ಮೀಸಲು ಸ್ಥಾನ, ಹಿಂದುಳಿದ ವರ್ಗ ಪ್ರವರ್ಗ ಎ ಮೀಸಲು ಸ್ಥಾನ ಹಾಗೂ ಹಿಂದುಳಿದ ವರ್ಗ ಪ್ರವರ್ಗ ಬಿ ಮೀಸಲು ಸ್ಥಾನದಿಂದ ಹಾಗೂ ಎರಡು ಮಂದಿ ಮಹಿಳಾ ಮೀಸಲು ಸ್ಥಾನದಿಂದ ನಿರ್ದೇಶಕರುಗಳ ಆಯ್ಕೆಯಾಗ ಬೇಕಾಗಿದೆ. ಅಭ್ಯರ್ಥಿಗಳು ತಮ್ಮ ನಾಮಪತ್ರವನ್ನು ಸಂಘದ ಕಛೇರಿಯಲ್ಲಿ ಕಾರ್ಯದರ್ಶಿಯವರಿಗೆ ಸಲ್ಲಿಸಲು ಅವಕಾಶವಿದ್ದು, ಡಿ.12ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಡಿ.13ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಂದೇ ರಿಟರ್ನಿಂಗ್ ಅಧಿಕಾರಿಯವರಿಂದ ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳ್ಳಲಿದ್ದು, ಡಿ.14 ಅಭ್ಯರ್ಥಿಗಳಿಗೆ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಸಿಂಧುತ್ವ ಹೊಂದಿದ ಅಭ್ಯರ್ಥಿಗಳ ಪಟ್ಟಿ ಹಾಗೂ ಚಿಹ್ನೆಗಳ ಹಂಚಿಕೆ ನಡೆಯಲಿದೆ.‌
ಡಿ.20ರಂದು ಬೆಳಿಗ್ಗೆ 9ರಿಂದ ಅಪರಾಹ್ನ 3ರವರೆಗೆ ಸಂಘದ ಕಛೇರಿಯಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣೆ ಮುಗಿದ ಬಳಿಕ ಮತ ಎಣಿಕೆಯಾಗಿ ರಿಟರ್ನಿಂಗ್ ಅಧಿಕಾರಿಯವರು ಫಲಿತಾಂಶ ಘೋಷಿಸಲಿದ್ದಾರೆ.