ತಾಲೂಕಿನಾದ್ಯಂತ ಕೆಲಸ ನಿಲ್ಲಿಸಿದ ಸಂಜೀವಿನಿ ಮೇಲ್ವಿಚಾರಕಿಯರು – ಬೆಳಗಾವಿ ಅಧಿವೇಶನದ ಸಂದರ್ಭ ಪ್ರತಿಭಟನೆಗೆ ಸಿದ್ಧತೆ

0

ರಾಷ್ಟ್ರೀಯ ಜೀವನೋಪಾಯ ಅಭಿಯಾನದ ವತಿಯಿಂದ ರಾಜ್ಯದಲ್ಲಿ ಸಂಜೀವಿನಿ ಯೋಜನೆಯಡಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಒಕ್ಕೂಟ ರಚಿಸಿ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಜಾರಿಗೊಳಿಸಲು ಕಾರ್ಯನಿರ್ವಹಿಸುತ್ತಿರುವ ಎಂಬಿಕೆ ಮತ್ತು ಎಲ್ ಸಿಆರ್ ಪಿ ಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.1 ರಿಂದ ರಾಜ್ಯಾದ್ಯಂತ ಕೆಲಸ ನಿಲ್ಲಿಸಿ
ಪ್ರತಿಭಟನೆ ನಡೆಸುತ್ತಿದ್ದಾರೆ.


ಡಿ.1 ರಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಯೂನಿಯನ್ ವತಿಯಿಂದ ನಡೆದ ಜಿಲ್ಲಾ ಮಟ್ಟದ ಪ್ರತಿಭಟನೆಯಲ್ಲಿ ಸುಳ್ಯದ ಸುಮಾರು 50 ಮಂದಿ ಎಂಬಿಕೆ ಮತ್ತು ಎಲ್.ಸಿ.ಆರ್.ಪಿಗಳು ಭಾಗವಹಿಸಿದ್ದರು.


ಸುಳ್ಯ ತಾಲೂಕಿನಲ್ಲಿಯೂ ಸಂಜೀವಿನಿ ಒಕ್ಕೂಟದ ಎಂಬಿಕೆ ಮತ್ತು ಎಲ್ ಸಿ ಆರ್ ಪಿ ಗಳು ಕೆಲಸ ಸ್ಥಗಿತಗೊಳಿಸಿದ್ದಾರೆ.
ಡಿ.14 ರಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನೆಗೆ ಸಿದ್ದತೆ ನಡೆಯುತ್ತಿದ್ದು ಸುಳ್ಯ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ನ 25 ಮಂದಿ ಎಂಬಿಕೆ ಮತ್ತು ಎಲ್ ಸಿ ಆರ್ ಪಿ ಗಳು ಭಾಗವಹಿಸುತ್ತಾರೆಂದು ತಾಲೂಕು ಯೂನಿಯನ್ ಅಧ್ಯಕ್ಷೆ ಶ್ರೀಮತಿ ಗೀತಾ ಪ್ರೇಮ್ ತಿಳಿಸಿದ್ದಾರೆ.