ಮರ್ಕಂಜ : ನಾಳೆ(ಡಿ.16) ಮಿತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರೀಡೋತ್ಸವ, ಬೀಳ್ಕೊಡುಗೆ, ಸನ್ಮಾನ, ಪ್ರತಿಭಾ ಪುರಸ್ಕಾರ

0

ಶಾಲಾ ಮಕ್ಕಳ ಎಲ್ಲಾ ಪೋಷಕರಿಗೆ ಗೌರವಾರ್ಪಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತಡ್ಕ-ಮರ್ಕಂಜ ಹಾಗೂ ಹಳೆ ವಿದ್ಯಾರ್ಥಿ ಸಂಘ ಇದರ ಸಹಯೋಗದಲ್ಲಿ ಕ್ರೀಡೋತ್ಸವ, ಬೀಳ್ಕೊಡುಗೆ, ಸನ್ಮಾನ‌ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಹಾಗೂ ಶಾಲಾ ಮಕ್ಕಳ ಎಲ್ಲಾ ಪೋಷಕರಿಗೆ ಗೌರವಾರ್ಪಣೆ ಕಾರ್ಯಕ್ರಮವು ನಾಳೆ (ಡಿ.16) ಮಿತ್ತಡ್ಕ ಶಾಲಾ ವಠಾರದಲ್ಲಿ ಪೂರ್ವಾಹ್ನ 9 ಗಂಟೆಯಿಂದ ನಡೆಯಲಿದೆ.

ಪೂರ್ವಾಹ್ನ 9.00 ಗಂಟೆಗೆ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದೆ. ಬಳಿಕ ಸಾರ್ವಜನಿಕ ರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ.
ಸಂಜೆ 5 ಗಂಟೆಗೆ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ. ಇದರ ಸಭಾಧ್ಯಕ್ಷತೆಯನ್ನು ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಹೊಸೊಳಿಕೆ ವಹಿಸಲಿದ್ದಾರೆ.‌ ಶಾಸಕಿ‌ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಇದೇ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿದ್ದು ವರ್ಗಾವಣೆಗೊಂಡ ಶ್ರೀಮತಿ ಹೇಮಾವತಿಯರಿಗೆ ಬೀಳ್ಕೊಡುಗೆಯು ನಡೆಯಲಿದೆ. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳ ಎಲ್ಲಾ ಪೋಷಕರಿಗೆ ಗೌರವಾರ್ಪಣೆ ನಡೆಯಲಿದೆ.
ಬಳಿಕ ಅಂಗನವಾಡಿ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಹಾಗೂ ಡಾನ್ಸ್ ಕರ್ನಾಟಕ ಡಾನ್ಸ್ ಖ್ಯಾತಿಯ ಪ್ರಣನ್ಯ ಕುದ್ಪಾಜೆ ಇವರಿಂದ ವಿಶೇಷ ನೃತ್ಯ ಕಾರ್ಯಕ್ರಮ ನಡೆಯಲಿದೆ.