ಡಿ.12 : ಇಂದ್ರಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

0

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇಂದ್ರಾಜೆ,ಹಿರಿಯ ವಿದ್ಯಾರ್ಥಿ ಸಂಘ ಇಂದ್ರಾಜೆ ವತಿಯಿಂದ ಶಾಲಾ ವಾರ್ಷಿಕೋತ್ಸವ ,ಸಾಂಸ್ಕೃತಿಕ ಕಾರ್ಯಕ್ರಮವು ಡಿ.16 ರಂದು ನಡೆಯಲಿದೆ.
ಬೆಳಿಗ್ಗೆ ಗಂಟೆ 9.30 ಕ್ಕೆ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಶಿವರಾಮ ಕೆ ಧ್ವಜಾರೋಹಣ ನೆರವೇರಿಸಲಿದ್ದಾರೆ.
ರಾತ್ರಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪಾವನ ಜೋಗಿಬೆಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ.
ವೇದಿಕೆಯಲ್ಲಿ ಗ್ರಾ.ಪಂ.ಸದಸ್ಯ ಹರ್ಷ ಭಟ್, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ, ಪಂಜ ವಲಯ ಶಿಕ್ಷಣ ಸಂಯೋಜಕ ಶ್ರೀಮತಿ ಸಂಧ್ಯಾ ಕುಮಾರಿ, ಎಣ್ಮೂರು ಸಮೂಹ ಸಂಪನ್ಮೂಲ ವ್ಯಕ್ತಿ ಜಯಂತ ಕೆ, ಕ.ರಾ.ಪ್ರಾ.ಶಾ.ಶಿ.ಸಂ ಸುಳ್ಯ ಶಾಖೆಯ ಸಂಘಟನಾ ಕಾರ್ಯದರ್ಶಿ ಶ್ರೀಮತಿ ಸರೋಜಿನಿ ಕೆ,ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಧರ್ಮದರ್ಶಿಗಳಾದ ಕೆ.ಪರಮೇಶ್ವರಯ್ಯ, ಕಳಂಜ ಬಾಳಿಲ ವ್ಯ.ಸೇ.ಸ.ಸಂಘದ ಅಧ್ಯಕ್ಷ ಕೂಸಪ್ಪ ಗೌಡ ಮುಗುಪ್ಪು ಅತಿಥಿಗಳಾಗಿ ಉಪಸ್ಥಿತರಿರುವರು.
ಸಾಂಸ್ಕೃತಿಕ ಕಾರ್ಯಕ್ರಮ

ಸಂಜೆ ಗಂಟೆ 6.30 ಕ್ಕೆ ಅಂಗನವಾಡಿ ಕೇಂದ್ರ ಮತ್ತು ಇಂದ್ರಾಜೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಹಿರಿಯ ವಿದ್ಯಾರ್ಥಿಗಳಿಂದ ಹಾಗೂ ಪೋಷಕರಿಂದ ವಿದ್ಯಾಶ್ರೀ ಯಕ್ಷಗಾನ ಕಲಾವಿದರು ಹಾಗೂ ಪರವೂರ ಕಲಾವಿದರಿಂದ ಯಕ್ಷಗಾನ ಸುಂದರ ಇಂದ್ರಾಜೆ ನಿರ್ದೇಶನದ “ಮಹಿಷ ವಧೆ” ನಡೆಯಲಿದೆ.