ಕುಕ್ಕೆ ಸುಬ್ರಹ್ಮಣ್ಯ ಷಷ್ಠಿ ಜಾತ್ರೆ ಪ್ರಯುಕ್ತ ಮಠದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ಕುಕ್ಕೆ ಸುಬ್ರಹ್ಮಣ್ಯ ಷಷ್ಠಿ ಜಾತ್ರೆ ಸಂಭ್ರಮದ ಹಿನ್ನೆಲೆಯಲ್ಲಿ ಬೀದಿ ಮಡೆ ಸ್ನಾನವು ನಡೆಯುತ್ತಿರುವ ವ ಕಾರಣ ಕುಮಾರಧಾರ ದಿಂದ ಸುಬ್ರಹ್ಮಣ್ಯ ದೇವಸ್ಥಾನ ವರೆಗೆ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠ ವತಿಯಿಂದ ಸ್ವಚ್ಚತಾ ಕಾರ್ಯವನ್ನು ಡಿ. 15 ರಂದು ಮಾಡಲಾಯಿತು.

ಶ್ರೀ ಸುಬ್ರಹ್ಮಣ್ಯ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ್ ಅವರ ನೇತೃತ್ವದಲ್ಲಿ ದೇವಸ್ಥಾನ ದಿಂದ ಕುಮಾರಧಾರ ವರೆಗೆ ಶ್ರೀ ಸುಬ್ರಹ್ಮಣ್ಯ ಮಠದ ವತಿಯಿಂದ ರಸ್ತೆ ಮದ್ಯೆಇದ್ದ ಕಸ, ಮರಳುಗಳನ್ನು ತೆಗೆದು ನೀರುಹಾಕಿ ತೊಳೆದು ಸ್ವಚ್ಛತಾ ಕಾರ್ಯ ನಡೆಯಿತು.


ಈ ಸಂದರ್ಭದಲ್ಲಿ ಶ್ರೀ ಮಠದಲ್ಲಿ ದುಡಿಯುವ ಸಿಬ್ಬಂಧಿಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.