ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಕೆ.ವಿ.ಜಿ. ಸಾಧನೆ-ಸಂಸ್ಮರಣೆ ಕಾರ್ಯಕ್ರಮ

0

ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಸುಳ್ಯ ಇದರ ಆಶ್ರಯದಲ್ಲಿ ಡಾ. ಕುರುಂಜಿ ವೆಂಕಟ್ರಮಣ ಗೌಡರ 95 ನೇ ಜಯಂತ್ಯೋತ್ಸವದ ಸವಿನೆನಪಿಗಾಗಿ ಕೆ. ವಿ. ಜಿ‌. ಸಾಧನೆ- ಸಂಸ್ಮರಣೆ ಹಾಗೂ ಶಾಲಾ ಗ್ರಂಥಾಲಯಕ್ಕೆ ಪುಸ್ತಕ ವಿತರಣೆ ಕಾರ್ಯಕ್ರಮ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು.
ಶಾಲಾ ಮುಖ್ಯೋಪಾಧ್ಯಾಯಿನಿಯವರು ಮತ್ತು ಅತಿಥಿಗಳು ಕೆವಿಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಸುದ್ದಿ ಬಿಡುಗಡೆ ಪ್ರಧಾನ ವರದಿಗಾರ ಹಾಗೂ ಸುಳ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ರವರು ಕೆವಿಜಿ ಸಂಸ್ಮರಣಾ ಭಾಷಣ ಮಾಡಿದರು.
ಕೆವಿಜಿ ಸುಳ್ಯ ಹಬ್ಬ‌ ಕಾರ್ಯಕ್ರಮದ ನಿರ್ದೇಶಕರಾದ ಹರೀಶ್ ರೈ ಉಬರಡ್ಕ ಹಾಗೂ ರಾಜು ಪಂಡಿತ್, ಪತ್ರಕರ್ತ ಶರೀಫ್ ಜಟ್ಟಿಪಳ್ಳ ಉಪಸ್ಥಿತರಿದ್ದರು.

ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಅನನ್ಯ ಕುರುಂಜಿಯವರ ಕುರಿತು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಭಾಷಣ ಸ್ಪರ್ಧಾ ವಿಜೇತರಾದವರಿಗೆ ಬಹುಮಾನ ಮತ್ತು ಶಾಲಾ ಗ್ರಂಥಾಲಯಕ್ಕೆ ಪುಸ್ತಕ ವಿತರಣೆ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳನ್ನು ಶಾಲಾ ಶಿಕ್ಷಕಿ ದೇವಿಲತಾ ಪರಿಚಯಿಸಿದರು. ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಬಿನೋಮ ಸ್ವಾಗತಿಸಿ, ಶಿಕ್ಷಕಿ ಸವಿತಾ ಕುತ್ತಿಮುಂಡ ಧನ್ಯವಾದ ಅರ್ಪಿಸಿದರು. ಶಿಕ್ಷಕರಾದ ಪುರುಷೋತ್ತಮ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.