ಡಿ.26 ರಂದು ಕ್ರೀಡಾ ಶಾಲೆ, ವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ

0

ಯುವ ಸಬಲೀಕರಣ ಕ್ರೀಡಾ ಇಲಾಖೆ ವತಿಯಿಂದ 2023-24 ನೇ ಸಾಲಿಗೆ ರಾಜ್ಯ, ಜಿಲ್ಲಾ ಕ್ರೀಡಾ ಶಾಲೆ, ವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆಯು ಡಿ.26 ರಂದು ಸುಳ್ಯದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.


ಕಿರಿಯರ ವಿಭಾಗ 5ನೇ ತರಗತಿ: ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ವಸತಿ ನಿಲಯಕ್ಕೆ ಆಯ್ಕೆ ಬಯಸುವ ಕ್ರೀಡಾಪಟುಗಳು ಪ್ರಸ್ತುತ 4 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, 2024-25 ನೇ ಸಾಲಿಗೆ 5 ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಪಡೆಯಬೇಕು. ಹಾಗೂ ದಿನಾಂಕ 1.6.2024 ಕ್ಕೆ 11 ವರ್ಷ ಒಳಗಿನವರಾಗಿರಬೇಕು
.

ಕಿರಿಯರ ವಿಭಾಗ 8 ನೇ ತರಗತಿ:
ಪ್ರಸ್ತುತ 7 ನೇ ತರಗತಿಯಲ್ಲಿ ವ್ಯಾಸಂಗ ಮಾಡುತಿದ್ದು, 2024-25 ನೇ ಸಾಲಿಗೆ 8ನೇ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಪಡೆಯಬೇಕು ಹಾಗೂ ದಿನಾಂಕ 1.6.2024 ಕ್ಕೆ 14 ವರ್ಷ ಒಳಗಿನವರಾಗಿಬೇಕು.

ಹಿರಿಯರ ವಿಭಾಗ:
ಹಿರಿಯರ ವಿಭಾಗದ ಕ್ರೀಡಾ ಶಾಲೆ, ವಸತಿ ನಿಲಯಗಳಿಗೆ ಆಯ್ಕೆ ಬಯಸುವ ಕ್ರೀಡಾ ಪಟುಗಳು ಪ್ರಸ್ತುತ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತಿದ್ದು, 2024-25 ನೇ ಸಾಲಿಗೆ ಪ್ರಥಮ ಪಿಯುಸಿ ಗೆ ಪ್ರವೇಶ ಪಡೆಯಲು ಅರ್ಹತೆ ಪಡೆದು, ದಿನಾಂಕ 1.6.2024 ಕ್ಕೆ 17 ವರ್ಷ ಒಳಗಿನವರಾಗಿರಬೇಕು.
ಕ್ರೀಡಾಪಟುಗಳು ಸಂಬಂಧಪಟ್ಟ ತಾಲೂಕುಗಳಲ್ಲಿ ಭಾಗವಹಿಸುವಂತೆ ತಿಳಿಸಿದೆ. ಸಂಬಂಧಪಟ್ಟ ತಾಲೂಕಿನಲ್ಲಿ ಭಾಗವಹಿಸಲು ಸಾಧ್ಯವಾಗದೇ ಇದ್ದಲ್ಲಿ ಜಿಲ್ಲೆಯ ಇತರೆ ತಾಲೂಕಿನಲ್ಲಿ ನಡೆಯುವ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಭಾಗವಹಿಸುವ ವಿದ್ಯಾರ್ಥಿಗಳು ದೃಢೀಕೃತ ಜನನ ಪ್ರಮಾಣ ಪತ್ರವನ್ನು ತರತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಯುವ ಸಬಲೀಕರಣ ಕ್ರೀಡಾ ಇಲಾಖೆ, ಮಂಗಳೂರು ಇವರನ್ನು ಸಂಪರ್ಕಿಸಬಹುದು.