ಸುಳ್ಯ ಸೈಂಟ್ ಜೋಸೆಫ್ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

0

ಸುಳ್ಯ ಸೈಂಟ್ ಜೋಸೆಫ್ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ ಡಿ. 23ರಂದು ನಡೆಯಿತು. ಸಹ ಶಿಕ್ಷಕಿ ಸಿಸ್ಟರ್ ಸ್ಟೆಲ್ಲಾ ಮೇರಿ ಹಾಗೂ ಪಂಗಡದವರಿಂದ ಪ್ರಾರ್ಥನಾ ಗೀತೆ ಹಾಡಲಾಯಿತು.


ಶಾಲಾ ಸಂಚಾಲಕರಾದ ರೆ. ಫಾ ವಿಕ್ಟರ್ ಡಿಸೋಜಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕ್ರಿಸ್ಮಸ್ ಸಂದೇಶ ನೀಡಿದರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಬಿನೋಮ ಹಾಗೂ ಪ್ರೌಢಶಾಲಾ ಶಿಕ್ಷಕ ಕಾರ್ಯದರ್ಶಿ ಶ್ರೀಮತಿ ಅನಿತಾ ಮಸ್ಕರೇನಸ್ ಉಪಸ್ಥಿತರಿದ್ದರು. ಕು.ಟಿ .ವರ್ಷ ಇವರು ಕ್ರಿಸ್ಮಸ್ ಸಂದೇಶ ನೀಡಿದರು. ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರು ಕ್ರಿಸ್ಮಸ್ ಕ್ಯಾರೋಲ್ಸ್ ಹಾಡಿದರು. ಶಿಕ್ಷಕಿ ಶ್ರೀಮತಿ ರೇಷ್ಮಾ ರವರು ಸ್ವಾಗತಿಸಿ ಶಿಕ್ಷಕಿ ಶ್ರೀಮತಿ ಕವಿತಾ ರವರು ವಂದಿಸಿದರು. ಶಿಕ್ಷಕಿ ಶ್ರೀಮತಿ ಜೂಲಿಯೆಟ್ ಲೋಬೊ ಕಾರ್ಯಕ್ರಮ
ನಿರೂಪಿಸಿದರು.