ಕರ್ನಾಟಕ ಯಾದವ ಸಭಾ ಕೇಂದ್ರ ಸಮಿತಿ ಮಂಗಳೂರು ಇದರ ಸುಳ್ಯ ತಾಲೂಕು ಸಮಿತಿಯ ಆಶ್ರಯದಲ್ಲಿ ಯಾದವ ಸಮಾವೇಶ 2023, ಶ್ರೀ ಸತ್ಯನಾರಾಯಣ ಪೂಜೆ, ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಸಂಭ್ರಮವು ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ಆರಂಭಗೊಂಡಿದೆ.
ಬೆಳಿಗ್ಗೆ ಶ್ರೀ ಸತ್ಯನಾರಾಯಣ ಪೂಜೆ ನಡೆದಿದ್ದು, ಬಳಿಕ ನಡೆದ ಯಾದವ ಸಮಾವೇಶವನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿದರು.
ತಾಲೂಕು ಸಮಿತಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ಕಾಸರಗೋಡು ಸರ್ಕಾರಿ ಮಹಾವಿದ್ಯಾಲಯದ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ರತ್ನಾಕರ ಮಲ್ಲಮೂಲೆ ಅವರು ಭಾಗವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಯಾದವ ಸಭಾ ಕೇಂದ್ರ ಸಮಿತಿ ಅಧ್ಯಕ್ಷ ಎ.ಕೆ. ಮಣಿಯಾಣಿ ಬೆಳ್ಳಾರೆ, ಕೇಂದ್ರ ಸಲಹಾ ಮಂಡಳಿ ಅಧ್ಯಕ್ಷ ಸುಧಾಮ ಆಲೆಟ್ಟಿ, ಕೇಂದ್ರ ಸಮಿತಿ ಉಪಾಧ್ಯಕ್ಷ ವಿ.ವಿ. ಬಾಲನ್, ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಸದಾನಂದ ಕಾವೂರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ಯಾದವ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.
ಜಿಲ್ಲಾ ಕಾರ್ಯದರ್ಶಿ ರಾಮಚಂದ್ರ ಕೇನಾಜೆ, ತಾಲೂಕು ಸಮಿತಿ ಕಾರ್ಯದರ್ಶಿ ಕೃಷ್ಣ ಬೆಟ್ಟ, ಉಪಾಧ್ಯಕ್ಷರಾದ ಬಾಲಕೃಷ್ಣ ಅಡ್ಡಬೈಲು, ಕೃಷ್ಣ ಅಕ್ಕಪ್ಪಾಡಿ, ಕೋಶಾಧಿಕಾರಿ ದಾಮೋದರ ಕೇನಾಜೆ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ರಾಜೀವಿ ಪರ್ಲಿಕಜೆ, ಯುವ ಘಟಕದ ಅಧ್ಯಕ್ಷ ವಿನೋದ್ ಕೊಯಿಂಗಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮೇಘ ಕೃಷ್ಣ ಕಾಯರ್ತೋಡಿ ಪ್ರಾರ್ಥಿಸಿದರು. ಕೃಷ್ಣ ಬೆಟ್ಟ ಸ್ವಾಗತಿಸಿದರು. ಕರುಣಾಕರ ಹಾಸ್ಪಾರೆ ಪ್ರಸ್ತಾವನೆಗೈದರು. ಅಚ್ಚುತ ಅಟ್ಲೂರು ಕಾರ್ಯಕ್ರಮ ನಿರೂಪಿಸಿದರು.