ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ದೈ.ಶಿ. ಪರಿವೀಕ್ಷಣಾಧಿಕಾರಿಗಳಿಗೆ ಸ್ವಾಗತ

0

ಸುಳ್ಯ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ನೂತನವಾಗಿ ಅಧಿಕಾರ ಸ್ವೀಕರಿಸಿದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಶ್ರೀಮತಿ ಆಶಾ ನಾಯಕ್ ಅವರನ್ನು ಜ.1 ರಂದು ಸ್ವಾಗತಿಸಲಾಯಿತು.

ಈ ಸಂದರ್ಭ ಸುಳ್ಯ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಧನಂಜಯ, ದ.ಕ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ಯೊಗೀಶ್ ಪಂಜ, ತಾಲೂಕು ದೈ.ಶಿ.‌ಶಿ ಕೋಶಾಧಿಕಾರಿ ಉಮೇಶ್ ಪಂಜ, ನಿಕಟ ಪೂರ್ವ ದೈ.ಶಿ ಪರೀಕ್ಷಕ ಸೂಫಿ ಪೇರಾಜೆ, ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.