ಪೆರಾಜೆ : ಜ್ಯೋತಿ ಪ್ರೌಢಶಾಲೆಯಲ್ಲಿ ಕುವೆಂಪು ಜನ್ಮದಿನಾಚರಣೆ

0

ಸ್ವಂತಿಕಾ ಸಾಹಿತ್ಯ ಸಾಂಸ್ಕೃತಿಕ ಬಳಗ ಸುಳ್ಯ ಹಾಗೂ ಜ್ಯೋತಿ ಪ್ರೌಢಶಾಲೆ ಪೆರಾಜೆ ಇದರ ಸಂಯುಕ್ತ ಆಶ್ರಯದಲ್ಲಿ ಜ್ಯೋತಿ ಪ್ರೌಢಶಾಲೆಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ಕುವೆಂಪುರವರ ಜನ್ಮದಿನಾಚರಣೆಯನ್ನು ಡಿ.29 ರಂದು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಯೋತಿ ವಿದ್ಯಾ ಸಂಘದ ಅಧ್ಯಕ್ಷರಾದ ಡಾ.ಎನ್.ಎ.ಜ್ಞಾನೇಶ್ ವಹಿಸಿದ್ದರು. ಪ್ರಧಾನ ಭಾಷಣಕಾರರಾಗಿ ಸುಳ್ಯ ಸ್ವಂತಿಕಾ ಸಾಹಿತ್ಯ ಸಾಂಸ್ಕೃತಿಕ ಬಳಗದ ಅಧ್ಯಕ್ಷ ನಾರಾಯಣ ನೀರಬಿದಿರೆ ಉಪಸ್ಥಿತರಿದ್ದರು.ಮುಖ್ಯ ಅತಿಥಿಗಳಾಗಿ ಶಾಲಾ ಸಂಚಾಲಕರಾಗಿ ಹರೀಶ್ಚಂದ್ರ ಮಂಡುಕಜೆ, ಗೋಪಾಲ್ ಪೆರಾಜೆ , ಲೋಕನಾಥ್ ಅಮಚೂರ್, ಹಿರಿಯ ಶಿಕ್ಷಕರಾದ ಡಿ. ಪಿ. ಪೂವಪ್ಪ, ಶಾಲಾ ಮುಖ್ಯ ಶಿಕ್ಷಕ ಜಿ.ಆರ್.ನಾಗರಾಜ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನೀನಾಸಂ ವಿರಚಿತ ‘ಪ್ರಯಾಣದ ಅಧಿಕ ಪ್ರಸಂಗಗಳು’ (ಹಾಸ್ಯ) ಪುಸ್ತಕ ಬಿಡುಗಡೆ ಮಾಡಲಾಯಿತು. ಕುವೆಂಪು ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.

ಮುಖ್ಯ ಶಿಕ್ಷಕರಾದ ಜಿ.ಆರ್.ನಾಗರಾಜ್ ಸ್ವಾಗತಿಸಿ, ಸಹಶಿಕ್ಷಕಿ ಶ್ರೀಮತಿ ಸುಮನ ವಂದಿಸಿದರು. ನಿರ್ದೇಶಕರಾದ ಅಶೋಕ್ ಪೀಚೆ ಕಾರ್ಯಕ್ರಮ ನಿರೂಪಿಸಿದರು.