ಕೆ.ಟಿ.ವಿಶ್ವನಾಥರಿಗೆ ಸನ್ಮಾನ- ಸಾಂಸ್ಕೃತಿಕ ವೈವಿಧ್ಯ
ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ಮಿತ್ರ ಕುರಲ್ ಸಾಂಸ್ಕೃತಿಕ ಉತ್ಸವ- 2024 ದುಗ್ಗಲಡ್ಕ ಪ್ರೌಢಶಾಲಾ ವಠಾರದಲ್ಲಿ ಜ.13 ರಂದು ನಡೆಯಿತು.
ಸಂಜೆ ನಡೆದ ಸಭಾ ಮತ್ತು ಸನ್ಮಾನ ಕಾರ್ಯಕ್ರಮವನ್ನು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಸಿ. ಜಯರಾಮ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜ್ಞಾನ ರತ್ನ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಕಟೀಲು ಇದರ ಅಧ್ಯಕ್ಷರಾದ ಭಾಸ್ಕರ ಗೌಡ ದೇವಸ್ಯ, ಸುಳ್ಯ ವಲಯ ಅರಣ್ಯಾಧಿಕಾರಿ ಮಂಜುನಾಥ ಎನ್. ,ಜ್ಞಾನ ಮಂದಾರ ಎಜುಕೇಶನ್ ಟ್ರಸ್ಟ್ ಬೆಂಗಳೂರು ಇದರ ಸ್ಥಾಪಕರಾದ ಸೋಮಶೇಖರ್, ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಹರೀಶ್ ರೈ ಉಬರಡ್ಕ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕುರಲ್ ತುಳುಕೂಟದ ಸಂಚಾಲಕ ಕೆ. ಟಿ.ವಿಶ್ವನಾಥರನ್ನು ಮತ್ತು ರವೀಂದ್ರ ಶೆಟ್ಟಿ ನುಳಿಯಾಲು ರವರನ್ನು ಸನ್ಮಾನಿಸಲಾಯಿತು.ವೇದಿಕೆಯಲ್ಲಿ ಸಮಾಜ ರತ್ನ ಪ್ರಶಸ್ತಿ ಪುರಸ್ಕೃತರಾದ ಮಂಜುನಾಥ ಮೇಸ್ತ್ರಿ ಬಳ್ಳಾರಿ ಉಪಸ್ಥಿತರಿದ್ದರು.
ಕುರಲ್ ತುಳುಕೂಟದ ಅಧ್ಯಕ್ಷೆ ನವ್ಯ ದಿನೇಶ್ ಕೊಯಿಕುಳಿ, ಗೌರವಾಧ್ಯಕ್ಷ ನಾರಾಯಣ ಟೈಲರ್, ಯುವಕ ಮಂಡಲದ ಅಧ್ಯಕ್ಷ ಚೇತನ್ ಕಲ್ಮಡ್ಕ, ಕಾರ್ಯದರ್ಶಿ ಪ್ರದೀಪ್ ಕೊಯಿಕುಳಿ ವೇದಿಕೆಯಲ್ಲಿದ್ದರು. ಕುರಲ್ ತುಳುಕೂಟದ ಅಧ್ಯಕ್ಷೆ ನವ್ಯ ದಿನೇಶ್ ಸ್ವಾಗತಿಸಿ, ಯುವಕ ಮಂಡಲದ ಪೂರ್ವಾಧ್ಯಕ್ಷ ಭವಾನಿ ಶಂಕರ ಕಲ್ಮಡ್ಕ ವಂದಿಸಿದರು. ಶಿಕ್ಷಕ ಶಶಿಧರ ಮಾವಿನಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ದುಗ್ಗಲಡ್ಕ ಮತ್ತು ಅಂಗನವಾಡಿ ಪುಟಾಣಿಗಳಿಂದ ನೃತ್ಯ, ಕೊಯಿಕುಳಿ ಪ್ರಾ.ಶಾಲೆ ಮತ್ತು ದುಗ್ಗಲಡ್ಕ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಸುಳ್ಯದ ರಂಗಮಯೂರಿ ಕಲಾ ಶಾಲೆಯರಿಂದ ನೃತ್ಯ ವೈಭವ, ಖ್ಯಾತ ಗಾಯಕರಾದ ಶಶಿಧರ ಮಾವಿನ ಕಟ್ಟೆ, ಕೃಷ್ಣರಾಜ್ ಕೇರ್ಪಳ, ಪೂರ್ಣಿಮಾ ಕೃಷ್ಣರಾಜ್ ರವರಿಂದ ವಿಶೇಷ ರಸಸಂಜೆ ನಡೆಯಿತು.
ಕುರಲ್ ತುಳುಕೂಟದ ಸದಸ್ಯೆಯರಿಂದ ನೃತ್ಯ ನಡೆಯಿತು. ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಂಗಳೂರಿನ ಚಾ ಪರ್ಕ ತಂಡದಿಂದ ಪುದರ್ ದೀದಾಂಡ್ ತುಳು ಹಾಸ್ಯಮಯ ನಾಟಕ ನಡೆಯಿತು.