ಪತ್ರಕರ್ತ ಹಸೈನಾರ್ ಜಯನಗರ, ಗಾಯಕ ಕೃಷ್ಣ ರಾಜ್ ಸೇರಿದಂತೆ ವಿವಿಧ ಸಾಧಕರಿಗೆ ಸೇವಾ ಗೌರವ ಸನ್ಮಾನ
ಸ್ವರ ಮಾಧುರ್ಯ ಸಂಗೀತ ಬಳಗ ಪುತ್ತೂರು ಇದರ ವತಿಯಿಂದ ಕರ್ನಾಟಕ ಸರ್ಕಾರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಮಂಗಳೂರು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮಂಗಳೂರು,ಕನ್ನಡ ವಿಭಾಗ, ವಿಶ್ವವಿದ್ಯಾನಿಲಯ ಹಂಪನಕಟ್ಟೆ ಇದರ ಸಂಯುಕ್ತಾಶ್ರಯದಲ್ಲಿ ‘ಸಂವಿಧಾನ ಶಿಲ್ಪಿಯ ಪುನರಾವಲೋಕನ ವಿಶೇಷ ಶಿಬಿರ’ ಹಾಗೂ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ರವರೊಂದಿಗೆ ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮ ಜನವರಿ ೨೧ರಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಿತು.
ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸೇವಾ ಗೌರವ ಸನ್ಮಾನ ಕಾರ್ಯಕ್ರಮ ನಡೆದು ಮಾಧ್ಯಮ ಕ್ಷೇತ್ರದಿಂದ ಹಸೈನಾರ್ ಜಯನಗರ ಸುಳ್ಯ, ಸಿ ಶೇ ಕಜೆಮಾರ್, ಸಮಾಜ ಸೇವೆ ಬಿ ಕೆ ಸೇಸಪ್ಪ ಬೆದ್ರೆಕಾಡ್,ಸಂಗೀತ ಕೃಷ್ಣರಾಜ್ ಸುಳ್ಯ,ಬಾಲ ಪ್ರತಿಭೆ ಅಸ್ಮಿತ್ ಎ ಜೆ,ಚಿತ್ರಕಲೆ ಜಗನ್ನಾಥ್ ಅರಿಯಡ್ಕ ಇವರುಗಳು ಸೇವಾ ಗೌರವ ಸನ್ಮಾನ ನೆರವೇರಿಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಪ್ರೊ.ಜಯರಾಜ್ ಅಮೀನ್ ಸಾಧಕರನ್ನು ಗೌರವಿಸಿ ಸನ್ಮಾನಿಸಿದರು. ಪುತ್ತೂರು ಸುಧನಾ ಶಿಕ್ಷಣ ಸಂಸ್ಥೆಯ ಸಂಚಾಲಕ ರೇ. ವಿಜಯ ಹಾರ್ವಿನ್, ಮಾಜಿ ಅಪರ ಜಿಲ್ಲಾ ಸರ್ಕಾರಿ ವಕೀಲರಾದ ಮನೋರಾಜ್ ರಾಜೀವ, ಸುಳ್ಯ ವಕೀಲರ ಸಂಘದ ಮಾಜಿ ಅಧ್ಯಕ್ಷ ಎಂ ವೆಂಕಪ್ಪಗೌಡ, ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕನ್ನಡ ವಿಭಾಗದ ಮುಖ್ಯಸ್ಥ ಮಾಧವ ಎಂ ಕೆ, ಮಂಗಳೂರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಸಚಿನ್ ಕುಮಾರ್, ಮೈಸೂರು ಧ್ವನಿ ಫೌಂಡೇಶನ್ ಸಂಸ್ಥಾಪಕಿ ಡಾ. ಶ್ವೇತಾ ಮಡಪ್ಪಾಡಿ,ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀಮತಿ ಮಾಲತಿ,ಸ್ವರ ಮಾಧುರ್ಯ ಸಂಗೀತ ಬಳಗದ ನಿರ್ದೇಶಕಿ ಶ್ರೀಮತಿ ಪ್ರಮೀಳಾ ಜನಾರ್ಧನ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಸಮಾಜಕಲ್ಯಾಣ ಸಚಿವ ಮಹಾದೇವಪ್ಪ ಉದ್ಘಾಟಿಸಿದರು. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸಹಿತ ಹಲವು ಗಣ್ಯರು ಸಮಾರಂಭದಲ್ಲಿ ಭಾಗಿಯಾಗಿದ್ದರು.