ಪೈಚಾರು: ಆರ್ತಾಜೆ ನಿವಾಸಿಗಳಿಗೆ ಶಾಶ್ವತ ಕುಡಿಯುವ ನೀರಿಗಾಗಿ ಜೆ.ಜೆ.ಎಂ. ಯೋಜನೆಯಡಿ ಪೈಪ್ ಲೈನ್ ಅಳವಡಿಕೆ

0

ಗ್ರಾ.ಪಂ. ಸದಸ್ಯರ ನೇತೃತ್ವದಲ್ಲಿ ನಡೆದ ಪೈಪ್ ಲೈನ್ ಅಳವಡಿಕೆ ಕಾಮಗಾರಿ

ಜಾಲ್ಸೂರು ಗ್ರಾಮದ ಪೈಚಾರಿನ ಆರ್ತಾಜೆ ನಿವಾಸಿಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಸಲುವಾಗಿ ಗ್ರಾಮ ಪಂಚಾಯತಿ ಜಲಜೀವನ್ ಮಿಷನ್ ಯೋಜನೆ ಹಾಗೂ ಮನೆ ಮನೆಗೆ ಗಂಗೆ ಯೋಜನೆಯಡಿಯಲ್ಲಿ ಪೈಪ್ ಲೈನ್ ಅಳವಡಿಕೆ ಕಾಮಗಾರಿಯು ಜ.26ರಂದು ನಡೆಯಿತು.

ಗ್ರಾಮ ಪಂಚಾಯತಿ ಸದಸ್ಯರಾದ ಮುಜೀಬ್ ಪೈಚಾರು, ಶ್ರೀಮತಿ ಗೀತಾ ಗೋಪಿನಾಥ್ ಬೊಳುಬೈಲು ಹಾಗೂ ಶ್ರೀಮತಿ ಗೀತಾ ಚಂದ್ರಹಾಸ ಅರ್ಭಡ್ಕ ಅವರ ನೇತೃತ್ವದಲ್ಲಿ ಜೆ‌.ಸಿ.ಬಿ. ಮೂಲಕ ಪೈಪ್ ಲೈನ್ ಅಳವಡಿಕೆ ಕಾಮಗಾರಿ ನಡೆಸಲಾಗಿದ್ದು, ಆರ್ತಾಜೆ ಭಾಗದ ಸುಮಾರು ಇಪ್ಪತ್ತು ಮನೆಯ ನಿವಾಸಿಗಳಿಗೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ.