ನೆಹರು ಮೆಮೋರಿಯಲ್ ಕಾಲೇಜು : ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್‍ಯಕ್ರಮ

0

ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಜ. ೨೫ ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್‍ಯಕ್ರಮವನ್ನು ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ ಎಂ ಅವರು ರಾಷ್ಟ್ರೀಯ ಮತದಾರರ ದಿನಾಚರಣೆಯ ಪ್ರಾಮುಖ್ಯತೆಯ ಬಗ್ಗೆ ಮಾತನಾಡಿದರು. ಕಾಲೇಜಿನ ಬೋಧಕ, ಬೋಧಕೇತರ ವರ್ಗ, ವಿದ್ಯಾರ್ಥಿ ಸಮೂಹವು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.