ಸುಳ್ಯದ ಎಂ.ಜಿ.ಎಂ. ಶಾಲೆಯಲ್ಲಿ ಗಣರಾಜ್ಯೋತ್ಸವ

0

ಸುಳ್ಯದ ಕೊಡಿಯಾಬೈಲಿನ ಮಹಾತ್ಮ ಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಸಂಚಾಲಕರಾದ ದೊಡ್ಡಣ್ಣ ಬರೆಮೇಲು ರವರು ಧ್ವಜಾರೋಹಣ ನೆರವೇರಿಸಿ, ಅತಿಥಿ ನೆಲೆಯಲ್ಲಿ ಮಾತಾಡಿದರು.


ಜೊತೆಗೆ ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ನಿರ್ದೇಶಕರಾದ ಜಯರಾಮ ದೇರಪಜ್ಜನಮನೆ, ಪೋಷಕ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪೂಜಾ, ಶಿಕ್ಷಕವೃಂದ, ಸಿಬ್ಬಂದಿವರ್ಗ, ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮಿ ಸ್ವಾಗತಿಸಿ, ಧೈಹಿಕ ಶಿಕ್ಷಣ ಶಿಕ್ಷಕ ನಿತಿನ್ ಮಜಿಕೋಡಿ ಕಾರ್ಯಕ್ರಮದ ವಂದನಾರ್ಪಣೆ ನಡೆಸಿಕೊಟ್ಟರು.