ಗೂನಡ್ಕ ಶ್ರೀ ಶಾರದಾ ಅನುದಾನಿತ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

0

ದ.ಕ. ಸಂಪಾಜೆ ಗ್ರಾಮದ ಗೂನಡ್ಕದ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇಶದ 75ನೇ ಗಣರಾಜ್ಯೋತ್ಸವನ್ನು ಜ.26ರಂದು ಆಚರಿಸಲಾಯಿತು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಿ. ರಾಮಚಂದ್ರ ಕಲ್ಲಗದ್ದೆ ಅವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಾಲಾ ಎಸ್. ಡಿ. ಎಂ. ಸಿ. ಉಪಾಧ್ಯಕ್ಷೆ ಶ್ರೀಮತಿ ಆಶಾ ವಿನಯ್ ಉಪಸ್ಥಿತರಿದ್ದರು ಮುಖ್ಯೋಪಾಧ್ಯಾಯ ಹನುಮಂತಪ್ಪ ಅವರು ಸ್ವಾಗತಿಸಿ, ಗೌರವ ಶಿಕ್ಷಕಿ ಶ್ರೀಮತಿ ಭವಿತ ಕೆ. ಪಿ. ಗಣರಾಜ್ಯೋತ್ಸವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿ ವಂದಿಸಿದರು.