ದುಗ್ಗಲಡ್ಕದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ

0

ಲಯನ್ಸ್ ಕ್ಲಬ್ ಸುಳ್ಯ, ಭಾರತ ಸೇವಾ ದಳ ದ. ಕ. ಮಂಗಳೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಮಂಗಳೂರು, ಡಾ. ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್‌ ಟ್ರಸ್ಟ್ (ರಿ.),ಸೆಂಚುರಿ ಗ್ರೂಪ್ಸ್ ಬೆಂಗಳೂರು,ಸುಳ್ಯ-ಪುತ್ತೂರು ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳು ಕೂಟ ದುಗಲಡ್ಕ ಇವರ ಸಂಯುಕ್ತ ಆಶ್ರಯದಲ್ಲಿಉಚಿತ ನೇತ್ರ ತಪಾಸಣೆ ಶಿಬಿರ ಇಂದು ಸರಕಾರಿ ಪ್ರೌಢಶಾಲೆ ದುಗಲಡ್ಕ ಇಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಲಯನ್ಸ್ ಕ್ಲಬ್‌ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಚೀಫ್ ಡಿಸ್ಟಿಕ್ಟ್ ಚೆಯರ್ ಪರ್ಸನ್ -ವಿಷನ್ ಸ್ವರೂಪ್ ಎನ್‌.ಶೆಟ್ಟಿ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿದ್ದ ಭಾರತ್ ಸೇವಾ ದಳದ ತಾಲೂಕು ಸಮಿತಿ ಅಧ್ಯಕ್ಷರಾದ ಕೆ.ವಿ.ದಾಮೋದರ ಗೌಡ, ಪ್ರಸಾದ್ ನೇತ್ರಾಲಯ ಮಂಗಳೂರಿನ ಡಾ. ಅನುಷಾ ಮಾತನಾಡಿದರು.

ಭಾರತ್ ಸೇವಾದಳದ ಜಿಲ್ಲಾ ಸಂಘಟಕರಾದ ಟಿ.ಎಸ್‌.ಮಂಜೇ ಗೌಡ, ಜಿಲ್ಲಾ ಸಮಿತಿ ಸದಸ್ಯ ಚಂದ್ರಶೇಖರ ನಂಜೆ, ಸುಳ್ಯ ಲಯನ್ಸ್ ಕ್ಲಬ್ ಖಜಾಂಜಿ ಕಿರಣ್ ನೀರ್ಪಾಡಿ, ಯೋಜನಾ ನಿರ್ದೇಶಕ ಕೆ.ಟಿ.ವಿಶ್ವನಾಥ, ಕುರಲ್ ತುಳುಕೂಟದ ಅಧ್ಯಕ್ಷೆ ನವ್ಯ ದಿನೇಶ್ ಕೊಯಿಕುಳಿ, ಮಿತ್ರ ಯುವಕ ಮಂಡಲದ ಅಧ್ಯಕ್ಷ ಚೇತನ್ ಕಲ್ಮಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ರಿತೇಶ್ ಕಲ್ಮಡ್ಕ ಪ್ರಾರ್ಥಿಸಿದರು. ಕೆ.ಟಿ.ವಿಶ್ವನಾಥ ಸ್ವಾಗತಿಸಿ, ಕಿರಣ್ ನೀರ್ಪಾಡಿ ವಂದಿಸಿದರು. ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ 160ಕ್ಕೂ ಅಧಿಕ ಮಂದಿ ಭಾಗಿಯಾಗಿ ಉಚಿತ ಶಿಬಿರದ ಪ್ರಯೋಜನ ಪಡೆದುಕೊಂಡರು.