ಶ್ರೀ ಶಾರದ ಹೆಣ್ಣು ಮಕ್ಕಳ ಪ್ರೌಢಶಾಲೆಯಲ್ಲಿ ಬೋರ್ಡ್ ಪರೀಕ್ಷೆಯನ್ನು ಎದುರಿಸುವ ಕಲೆ ಮತ್ತು ಪರಿಣಾಮಕಾರಿ ಸಂವಹನ ತರಬೇತಿ ಕಾರ್ಯಾಗಾರ

0

ಶ್ರೀ ಶಾರದ ಹೆಣ್ಣು ಮಕ್ಕಳ ಪ್ರೌಢಶಾಲೆ ಸುಳ್ಯ ಮತ್ತು ಅಂಜಲಿ ಮೋಂಟೊಸ್ಸರಿ ಶಾಲೆ ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಯನ್ನು ಎದುರಿಸುವ ಕಲೆ ಮತ್ತು ಪರಿಣಾಮಕಾರಿ ಸಂವಹನ ತರಬೇತಿ ಕಾರ್ಯಾಗಾರ ಜ.27 ರಂದು ರಂದು ಶಾರದಾ ಶಾಲೆಯಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಅಂಜಲಿ ಮೋಂಟೊಸ್ಸರಿ ಶಾಲೆಯ ಸಂಚಾಲಕಿ ಶ್ರೀಮತಿ ಗೀತಾಂಜಲಿ ಟಿ.ಜಿ. ಭಾಗವಹಿಸಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

ಕಳೆದ ಎರಡು ವರ್ಷಗಳಿಂದ ಅಂಜಲಿ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ನಿಂದ ಉಚಿತವಾಗಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಕಾರ್ಯಗಾರ ನಡೆಸಿಕೊಡುತ್ತಿದ್ದರು. ಈ ವರ್ಷ ತಾಲೂಕಿನ ಬೇರೆ ಬೇರೆ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ದೃಷ್ಟಿಯಿಂದ ಶಾಲೆಗೆ ತೆರಳಿ ಸರಣಿ ಕಾರ್ಯಗಾರವನ್ನು ಹಮ್ಮಿಕೊಂಡಿದ್ದಾರೆ.

ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯನಿ ಭಾರತಿ ಪಿ, ಶಿಕ್ಷಕ ವೃಂದ ಉಪಸ್ಥಿರಿದ್ದರು. ವಿದ್ಯಾರ್ಥಿಗಳು ಕಾರ್ಯಗಾರದ ಪ್ರಯೋಜನವನ್ನು ಪಡೆದುಕೊಂಡರು.