ನೀರಿನ ಕೊರತೆ

0

ಸುಬ್ರಮಣ್ಯ ಜ.29 ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆ.1ರಿಂದ ನಿಷೇಧಿಸಲಾಗಿದೆ. ಪ್ರಸ್ತುತ ಜಲ್ಲೆಯಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಫೆ.1ರಿಂದ ಅಕ್ಟೋಬರ್ ತನಕ ಅಥವಾ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.


ಈ ವರ್ಷದ ಕುಮಾರಪರ್ವತ ಚಾರಣ ಅವಧಿ ಮುಗಿದಿದೆ. ಅಲ್ಲದೆ ಪರ್ವತದ ಹುಲ್ಲುಗಾವಲು ಸಂಪೂರ್ಣ ಒಣಗಿರುವುದರಿಂದ ಮುಂದೆ ಬಿಸಿಲಿನ ಬೇಗೆಗೆ ಬೆಂಕಿಗೆ ತುತ್ತಾಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ. ಇದೀಗ ಕುಮಾರ ಪರ್ವತಕ್ಕೆ ಬರುವ ಚಾರಣಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಬೇಸಗೆಯ ಕಾರಣ ನೀರಿನ ಮೂಲಗಳು ಬತ್ತಿ ಹೋಗಿವೆ.ಚಾರಣಿಗರು ತಂಗುವ ಗಿರಿಗದ್ದೆಯಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಕ್ಕೆ ನೀರಿನ ವ್ಯವಸ್ಥೆ ಒದಗಿಸಲು ತೊಂದರೆಯಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

ಕುಕ್ಕೆ ಸುಬ್ರಹ್ಮಣ್ಯದ ಕುಮಾರ ಪರ್ವತದ ಚಾರಣಕ್ಕೆ ಸಾವಿರಾರು ಜನ ಬಂದು ನೂಕುನುಗ್ಗಲು ಆದ ಚಾರಣಿಗರು ಸೆರೆ ಹಿಡಿದ ವಿಡಿಯೋ ತುಣುಕು,ಪೋಟೋ ಗಳು ಸುದ್ದಿ ವೆಬ್ ಸೈಟ್ ಸಹಿತ ಹಲವು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿತ್ತು.ಇದಕ್ಕೆ ಅರಣ್ಯ ಸಚಿವರು ಮತ್ತು ರಾಜ್ಯ ಸರ್ಕಾರ ಚಾರಣಿಗರಿಗೆ ನಿರ್ಬಂಧ ವಿಧಿಸಲಾಗಿದೆ.ತೆರಳಲು ತಲಾ 300 ಮಂದಿ ಚಾರಣಿಗರಿಗೆ ಮಾತ್ರ ಅವಕಾಶ ಕಲ್ಪಿಸಿರುತ್ತದೆ..