ಶ್ರೀ ಕ್ಷೇತ್ರ ಗೌರಿಪುರಂನಲ್ಲಿ ಫೆ. 2ರಿಂದ 48 ದಿನಗಳ ಸಂಧ್ಯಾ ಭಜನಾ ಸಂಕೀರ್ತನೆ, ಪರಮಹಂಸ ಸ್ವಾಮೀಜಿಯವರಿಂದ ಚಾಲನೆ

0

ಬೆಳ್ಳಾರೆಯ ಶ್ರೀ ಕ್ಷೇತ್ರ ಗೌರಿಪುರಂನಲ್ಲಿ ಶ್ರೀ ರಾಜರಾಜೇಶ್ವರಿ ದೇವಿಯ ದೇವಾಲಯ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಶ್ರೀ ಕ್ಷೇತ್ರದಲ್ಲಿ ಫೆ. 2ರಿಂದ 48 ದಿನಗಳ ಕಾಲ ನಿರಂತರ ಸಂಧ್ಯಾ ಭಜನಾ ಸಂಕೀರ್ತನೆ ನಡೆಯಲಿದ್ದು,
ಫೆ. 2ರಂದು ಸಂಜೆ ಪರಮಪೂಜ್ಯ ಯೋಗಿ ಕೌಸ್ತುಭ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಚಾಲನೆ ನೀಡಿದರು.

ಪ್ರತೀ ದಿನ ಭಜನೆಯ ಬಳಿಕ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರಗಲಿದೆ. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ, ಕೋಶಾಧಿಕಾರಿ ಆನಂದ ಗೌಡ ಪಡ್ಪು, ಕಾರ್ಯದರ್ಶಿ ಕುಶಾಲಪ್ಪ ಗೌಡ ಮಣಿಮಜಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪಂಜಿಗಾರು, ಪೊಸವಳಿಕೆ ಸೇರಿದಂತೆ ಎರಡೂ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಅನ್ನದಾನಕ್ಕೆ ಸಹಾಕಾರ ನೀಡಿರುತ್ತಾರೆ.