ಪ್ರೊ ಕಬಡ್ಡಿ ತೆಲುಗು ಟೈಟಾನ್ಸ್ ತಂಡಕ್ಕೆ ಸುಳ್ಯ ಎನ್ನೆಂಸಿಯ ರತನ್ ಜಿ. ಆಯ್ಕೆ

0

ದೇಶದ ಪ್ರತಿಷ್ಠಿತ ಪ್ರೊ ಕಬಡ್ಡಿ ಲೀಗ್ ನಲ್ಲಿ ತೆಲುಗು ಟೈಟಾನ್ಸ್ ತಂಡವನ್ನು ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಥಮ ಎಂ.ಎಸ್.ಡಬ್ಲ್ಯೂ. ವಿದ್ಯಾರ್ಥಿ ರತನ್ ಜಿ ಪ್ರತಿನಿಧಿಸಲಿದ್ದಾರೆ.


ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ನ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ ಸಿ ಯವರು ಪ್ರಯೋಜಿಸುತ್ತಿರುವ ಕೆವಿಜಿ ಸ್ಪೋರ್ಟ್ ಕ್ಲಬ್ ನಲ್ಲಿ ತರಬೇತಿ ಪಡೆದು ಪ್ರೊ ಕಬ್ಬಡ್ಡಿ ತಂಡದಲ್ಲಿ ರೈಡರ್ ಆಗಿ ಸ್ಥಾನ ಪಡೆದಿದ್ದಾರೆ.
ರತನ್ ಈ ಹಿಂದೆ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಯಾಗಿ ಬಿ.ಕಾಂ ಪದವಿ ಪೂರೈಸಿದ್ದು ಆಲ್ ಇಂಡಿಯಾ ಇಂಟರ್ ಯೂನಿವರ್ಸಿಟಿ ಕ್ರೀಡಾಕೂಟದಲ್ಲಿ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿಧಿಸಿ ಅತ್ಯುತ್ತಮ ರೈಡರ್ ಪ್ರಶಸ್ತಿ ಪಡೆದಿದ್ದರು.
ಸಂಸ್ಥೆಯ ಹೆಮ್ಮೆಯ ಕ್ರೀಡಾಪಟುವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುತ್ತಿರುವ ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಅಧ್ಯಾಪಕ ವೃಂದದವರು ಶುಭಹಾರೈಸಿದ್ದಾರೆ.