ಬೆಳ್ಳಾರೆ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

0

ವಾಹನ ಜಖಂ, ಚಾಲಕ ಯಾವುದೇ ಅಪಾಯವಿಲ್ಲದೆ ಪಾರು

ಬೆಳ್ಳಾರೆ ಯಿಂದ ನಿಂತಿಕಲ್ಲು ಭಾಗಕ್ಕೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬೆಳ್ಳಾರೆ ಪಾಜಪಳ್ಳ ಬಳಿ ಸಂಭವಿಸಿದೆ.

ಅಪಘಾತಕ್ಕೀಡಾದ ಆಲ್ಟೋ ಕಾರು (KA19P9807) ನಂಬರಿನದಾಗಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಪಲ್ಟಿಯಾಗಿ ಪಕ್ಕದ ಚರಂಡಿಗೆ ಉರುಳಿದೆ. ಡಿಕ್ಕಿಯರಬಸಕ್ಕೆ ವಿದ್ಯುತ್ ಕಂಬಗಳು ಮುರಿದಿದ್ದು ಸವಾರ ಯಾವುದೇ ಪ್ರಾಣಪಾಯವಿಲ್ಲದೆ ಪರಾಗಿದ್ದಾರೆ. ಘಟನೆಯಿಂದ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ ಎಂದು ತಿಳಿದುಬಂದಿದೆ.