ದ.ಕ. ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗ್ರಾಮ ಪಂಚಾಯಿತಿ ಗುತ್ತಿಗಾರು ಶಂಖಶ್ರೀ ಸ್ತ್ರೀ ಶಕ್ತಿ ಗೊಂಚಲು, ಸಂಜೀವಿನಿ ಒಕ್ಕೂಟ ಗುತ್ತಿಗಾರು ಇವರ ಸಹಯೋಗದಲ್ಲಿ “ಮಗಳನ್ನು ಉಳಿಸಿ ಮಗಳನ್ನು ಓದಿಸಿ” ಯೋಜನೆಯಡಿ ಜಾಥಾ ಕಾರ್ಯಕ್ರಮ ಮತ್ತು ಬಾಗಿದಾರರಿಗೆ ಅರಿವು ಕಾರ್ಯಕ್ರಮವು ಫೆ.9ರಂದು ಗುತ್ತಿಗಾರು ಗಿರಿಜನ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮೂಕಮಲೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಗುತ್ತಿಗಾರು ಬಸ್ಸು ನಿಲ್ದಾಣದಿಂದ ಗ್ರಾಮ ಪಂಚಾಯಿತಿ ವರೆಗೆ ಜಾಥಾ ಕಾರ್ಯಕ್ರಮವನ್ನು ನಡೆಸಲಾಯಿತು.
ಜಾಥ ಕಾರ್ಯಕ್ರಮವನ್ನು ಗುತ್ತಿಗಾರು ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ಮಂಜುಳಾ ಮುತ್ಲಾಜೆ ಯವರು ಉದ್ಘಾಟಿಸಿ ಶುಭಹಾರೈಸಿದರು. ಬಳಿಕ ಗುತ್ತಿಗಾರಿನ ಗಿರಿಜನ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ಭಾರತಿ ಕೆಎಸ್ ಕಾರ್ಯಕ್ರಮ ಉದ್ಘಾಟಿಸಿದರು. ಡಾ. ಕುಲದೀಪ್ ವೈದ್ಯಾಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲಮೊಗ್ರ, ಧನಪತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗುತ್ತಿಗಾರು ಸಿ ಆರ್ ಪಿ ಮಹೇಶ್, ಪ್ರಾಥಮಿಕ ಆರೋಗ್ಯ ಕೇಂದ್ರದ ಗುತ್ತಿಗಾರು ಇಲ್ಲಿಯ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ಪದ್ಮವೇಣಿ, ಶಾಲಾ ಶಿಕ್ಷಕರು, ಗ್ರಾಮ ಪಂಚಾಯಿತ್ ಸದಸ್ಯರುಗಳಾದ ಮಂಜುಳಾ ಮತ್ಲಾಜೆ, ಲತಾ ಆಜಡ್ಕ ಇದು ವೇದಿಕೆಯಲ್ಲಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಹರೀಶ್ ಪೂಜಾರಿ ಕೊಡಿ ಇವರು ಪೋಸ್ಕೋ ಕಾಯಿದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. ಮೇಲ್ವಿಚಾರಕಿ ಶ್ರೀಮತಿ ವಿಜಯ ಸ್ವಾಗತಿಸಿ, ಕು| ಲತಾ ಅಂಬೆಕಲ್ಲು ಅಂಗನವಾಡಿ ಕಾರ್ಯಕರ್ತೆ ಬಳ್ಳಕ ಇವರು ವಂದಿಸಿದರು. ಕಾರ್ಯಕ್ರಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇಲ್ಲಿಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಂಖಶ್ರೀ ಸ್ತ್ರೀ ಶಕ್ತಿ ಗೊಂಚಲಿನ ಪದಾಧಿಕಾರಿಗಳು ಮತ್ತು ಸದಸ್ಯರು, ಸಂಜೀವಿನಿ ಒಕ್ಕೂಟ ಗುತ್ತಿಗಾರು ಇದರ ಪದಾಧಿಕಾರಿಗಳು ಮತ್ತು ಸದಸ್ಯರು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ತಾಯಂದಿರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮಕ್ಕೆ ಸಹಕರಿಸಿದರು. ಶ್ರೀಮತಿ ಅಭಿಲಾಷ ಗ್ರಂಥಪಾಲಕಿ ಗುತ್ತಿಗಾರು ಕಾರ್ಯಕ್ರಮ ನಿರೂಪಿಸಿದರು.