ಶ್ರೀ ಮಹಾವಿಷ್ಣು ದೇವಸ್ಥಾನ ನಿಡ್ವಾಳಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರೂಪಾಯಿ 5 ಲಕ್ಷ ಮೊತ್ತದ ಚೆಕ್ ಹಸ್ತಾಂತರ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ದ.ಕ.ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಚೆಕ್ ಹಸ್ತಾಂತರಿಸಿ ಮಾತನಾಡಿ ಸಂಸ್ಕೃತಿ, ಸಂಸ್ಕಾರವನ್ನು ಉಳಿಸಿ ಸಮಾಜದ ಅಭ್ಯುದಯಕ್ಕೆ ಕಾರಣವಾಗುವ ಇಂತಹ ಧಾರ್ಮಿಕ ಶೃದ್ಧಾಕೇಂದ್ರಗಳು ಎಲ್ಲರ ಸಹಕಾರದಿಂದ ಶೀಘ್ರ ಪುನರ್ ನಿರ್ಮಾಣ ಆಗಲಿ ಎಂದು ಹಾರೈಸಿದರು.
ನಿಡ್ವಾಳ ಕ್ಷೇತ್ರದ ವತಿಯಿಂದ ಚೆಕ್ ಸ್ವೀಕರಿಸಿದ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಪ್ರಕಾಶ್ ಕಂಬಳ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನೇಮಿರಾಜ ಪಲ್ಲೋಡಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಸಾಮಾಜಿಕ,ಧಾರ್ಮಿಕ ಕಾರ್ಯಗಳನ್ನು ಶ್ಲಾಘಿಸಿ ಕೃತಜ್ಞತೆ ಸಮರ್ಪಿಸಿದರು.
ವೇದಿಕೆಯಲ್ಲಿ ಸುಳ್ಯ ತಾಲೂಕು ಯೋಜನಾಧಿಕಾರಿ ನಾಗೇಶ್. ಪಿ ಹಾಗೂ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಕುಸುಮಾಧರ ಕರಿಮಜಲು ಉಪಸ್ಥಿತರಿದ್ದರು.
ಜನಜಾಗೃತಿ ವೇದಿಕೆಯ ಸದಸ್ಯ ಕುಶಾಲಪ್ಪ ದೊಡ್ಡಮನೆ, ಐವತ್ತೋಕ್ಲು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಧನ್ಯ, ಪಂಜ ವಲಯದ ವಲಯಾಧ್ಯಕ್ಷ ಧರ್ಮಪಾಲ ಕಣ್ಕಲ್, ಪಂಜ ವಲಯ ಮೇಲ್ವಿಚಾರಕಿ ಶ್ರೀಮತಿ ಕಲಾವತಿ, ನಿಂತಿಕಲ್ಲು ವಲಯ ಮೇಲ್ವಿಚಾರಕಿ ಶ್ರೀಮತಿ ಮಮತಾ , ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು, ಊರ ಪರ ಊರ ಭಗವಧ್ಬಕ್ತರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತೀರ್ಥಾನಂದ ಕೊಡೆಂಕಿರಿ ಸ್ವಾಗತಿಸಿ , ನಿರೂಪಿಸಿದರು, ಕುಸುಮಾಧರ ಕರಿಮಜಲು ವಂದಿಸಿದರು.