ಪಂಜದಲ್ಲಿ ಸಂವಿಧಾನ ಜಾಗೃತಿ ಜಾಥ

0

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ

ಪಂಜ ಪೇಟೆಯಿಂದ ಅದ್ದೂರಿಯ ಮೆರವಣಿಗೆ

ಸಂವಿಧಾನದ ಮೌಲ್ಯಗಳ ಕುರಿತು ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯ ಸರ್ಕಾರದ ವತಿಯಿಂದ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ರಥವು ಪಂಜಕ್ಕೆ ಫೆ.18ರಂದು ಸಂಜೆ ಪಂಜ ಪೇಟೆಗೆ ಆಗಮಿಸಿತು.

ಪಂಜ ಪೇಟೆಯಲ್ಲಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಜಳಕದಹೊಳೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ, ಸದಸ್ಯರು, ದಲಿತ ಸಂಘರ್ಷ ಸಮಿತಿ ಮುಖಂಡ ವಿಶ್ವನಾಥ ಅಲೆಕ್ಕಾಡಿ
ಮೊದಲಾದವರು ರಥದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಹಾರಾರ್ಪಣೆ ಮಾಡಿದರು.

.
ಬಳಿಕ ಮೆರವಣಿಗೆ ಮೂಲಕ ಗ್ರಾಮ ಪಂಚಾಯತ್ ವಠಾರಕ್ಕೆ ಸಾಗಿತು.ಮರೆವಣಿಗೆಯಲ್ಲಿ ಚೆಂಡೆ ತಂಡ, ಬ್ಯಾಂಡ್,ಬಾಳಿಲ
ವಾಲ್ಮೀಕಿ ಆಶ್ರಮ ಶಾಲೆ ವಿದ್ಯಾರ್ಥಿಗಳು ಭಾರತಾಂಬೆ, ಸೈನಿಕರ ವಿಶೇಷ ವೇಷ ಧರಿಸಿ ಆಕರ್ಷಣೆಯಾಗಿತ್ತು.

ಪಂಜ ಪ್ರಾಥಮಿಕ ಶಾಲೆ, ಹೈಸ್ಕೂಲ್, ನಾಗತೀರ್ಥ, ಪಾಂಡಿಗದ್ದೆ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು,ದಲಿತ ಸಂಘರ್ಷ ಸಮಿತಿಯವರು,ಗ್ರಾಮಸ್ಥರು,ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ವಿವಿಧ ಇಲಾಖೆಯವರು ಮೆರವಣಿಗೆಯಲ್ಲಿ ಭಾಗವಹಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸಭಾ ಕಾರ್ಯಕ್ರಮದಲ್ಲಿ
ಗ್ರಾ.ಪಂ. ಅಧ್ಯಕ್ಷೆ
ಶ್ರೀಮತಿ ವಿಜಯಲಕ್ಷ್ಮೀ ಜಳಕದಹೊಳೆ ಅಧ್ಯಕ್ಷತೆ ವಹಿಸಿದ್ದರು.ಡಾ.ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
ವೇದಿಕೆಯಲ್ಲಿ ನೋಡೆಲ್ ಅಧಿಕಾರಿ ಶ್ರೀಮತಿ ಗೀತಾ ಪಾಲ್ಗೊಂಡಿದ್ದರು.

ಪ್ರಗತಿಪರ ಕೃಷಿಕ ಶ್ರೇಯಂಸ್ ಕುಮಾರ್ ಶೆಟ್ಟಿಮೂಲೆ ರವರು ಸಂವಿಧಾನ ಜಾಗೃತಿಯ ಕುರಿತು ಮಾತನಾಡಿದರು.

ದಲಿತ ಸಂಘರ್ಷ ಸಮಿತಿ ಮುಖಂಡ ವಿಶ್ವನಾಥ ಅಲೆಕ್ಕಾಡಿ,
ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾರಾಯಣ ಕೃಷ್ಣನಗರ, ಸದಸ್ಯರಾದ ಲಕ್ಷ್ಮಣ ಗೌಡ ಬೊಳ್ಳಾಜೆ, ಚಂದ್ರಶೇಖರ ದೇರಾಜೆ, ಶ್ರೀಮತಿ ವೀಣಾ, ಶ್ರೀಮತಿ ಮಲ್ಲಿಕಾ, ಶ್ರೀಮತಿ ಪೂರ್ಣಿಮಾ ದೇರಾಜೆ,ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ ಯು.ಬಿ, ಕಾರ್ಯದರ್ಶಿ ಗೋಪಾಲಕೃಷ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ನಾಡಗೀತೆ , ಸಂವಿಧಾನ ಜಾಗೃತಿ ಗೀತೆ ಹಾಡಿದರು. ಗಿರೀಶ್ ನಾವುಡ ಬಳಗದಿಂದ ಸಂವಿಧಾನ ಜಾಗೃತಿಯ ಕಿರು ನಾಟಕ‌ ಪ್ರದರ್ಶನ ಗೊಂಡಿತ್ತು. ಶಿಕ್ಷಕ ಯಶೋಧರ ಕಳಂಜ ಪ್ರತಿಜ್ಞಾ ವಿಧಿ ಬೋಧಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ ಯು.ಬಿ ಸ್ವಾಗತಿಸಿದರು ಮತ್ತು ವಂದಿಸಿದರು.