ತೊಡಿಕಾನ ಶಾಲೆಯಲ್ಲಿ ಸ್ಪೋಕನ್ ಇಂಗ್ಲೀಷ್ ತರಬೇತಿ ಉದ್ಘಾಟನೆ – ಮೆಟ್ರಿಕ್ ಮೇಳ

0

ತೊಡಿಕಾನ ಸ. ಹಿ. ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿಯಿಂದ ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ತರಬೇತಿಯ ಉದ್ಘಾಟನೆ ಹಾಗೂ ಮೆಟ್ರಿಕ್ ಮೇಳ ಫೆ. 23 ರಂದು ನಡೆಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಇ. ರಮೇಶ್ ತರಬೇತಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಎಸ್. ಡಿ. ಎಂ. ಸಿ ಅಧ್ಯಕ್ಷ ನವೀನ್ ಎ. ಬಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಭವಾನಿ ಚಿಟ್ಟನ್ನೂರು, ಎಸ್. ಡಿ. ಎಂ. ಸಿ ಉಪಾಧ್ಯಕ್ಷೆ ಸೌಮ್ಯ ಭಟ್, ಮುಖ್ಯ ಶಿಕ್ಷಕ ಅರುಣ್ ಕುಮಾರ್,ತರಬೇತಿ ಶಿಕ್ಷಕರಾದ ಸ್ನೇಹಲತಾ, ಮಮತಾ, ಬಲರಾಜ್ ಇವರು ವೇದಿಕೆಯಲ್ಲಿದ್ದರು.


ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕರು ಹಾಗೂ ಎಸ್. ಡಿ. ಎಂ. ಸಿ. ಸದಸ್ಯರು ಸಹಕರಿಸಿದರು.
ಬಳಿಕ ಮೆಟ್ರಿಕ್ ಮೇಳ ನಡೆಯಿತು.